ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ಕಾರ್ಯಕರ್ತರು ಗಂಗಾವತಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಸೋಮವಾರ ಮನವಿ ಸಲ್ಲಿಸಿದರು. ನಗರ ಕಾರ್ಯದರ್ಶಿ ಕಿರಣ್ ವಸದ್, ಪದಾಧಿಕಾರಿಗಳಾದ ಪೃಥ್ವಿರಾಜ್, ಈಶ್ವರ್, ದೊಡ್ಡನಗೌಡ, ಮುದುಕಪ್ಪ ಇತರರಿದ್ದರು.  
ಜಿಲ್ಲೆ

ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನಿಯೋಜಿಸಿ

ಗಂಗಾವತಿ: ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನಿಯೋಜಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ಕಾರ್ಯಕರ್ತರು ನಗರದ ತಾಲೂಕಾಡಳಿತ ಸೌಧದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಮನವಿ ಸಲ್ಲಿಸಿದರು.

ನಗರ ಘಟಕದ ಕಾರ್ಯದರ್ಶಿ ಕಿರಣ್ ವಸದ್ ಮಾತನಾಡಿ, ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ತರಗತಿಗಳು ನಡೆಯುತ್ತಿಲ್ಲ. ಕಾಲೇಜು ಆರಂಭವಾಗಿ 2 ತಿಂಗಳಾದರೂ ಅತಿಥಿ ಉಪನ್ಯಾಸಕರು ನೇಮಕಗೊಂಡಿಲ್ಲ.

ಅತಿಥಿ ಉಪನ್ಯಾಸಕರು ಅರ್ಜಿ ಸಲ್ಲಿಸಿದ್ದರೂ ಸರ್ಕಾರದ ವಿಳಂಬ ಧೋರಣೆಯಿಂದ ಇನ್ನೂ ನೇಮಕವಾಗಿಲ್ಲ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳೇ ಓದುತ್ತಿದ್ದು, ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಯುಜಿಸಿ ನಿಯಮಾವಳಿಯಂತೆ ಅರ್ಹ ಉಪನ್ಯಾಸಕರನ್ನು ನಿಯೋಜಿಸುವಂತೆ ಒತ್ತಾಯಿಸಿದರು.

ಪದಾಧಿಕಾರಿಗಳಾದ ಪೃಥ್ವಿರಾಜ್, ಈಶ್ವರ್, ದೊಡ್ಡನಗೌಡ, ಮುದುಕಪ್ಪ, ಪ್ರತೀಕ್, ಶಿವರಾಜ್, ಯಮನೂರ್, ಹರ್ಷ, ಕೆ.ಸಂತೋಷ ಇತರರಿದ್ದರು.