ಗಂಗಾವತಿ ಜಿಎಚ್‌ಎನ್ ವಾಣಿಜ್ಯ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪದವಿ ಪ್ರದಾನ ಮತ್ತು ಬೀಳ್ಕೋಡುಗೆ ಕಾರ್ಯಕ್ರಮದಲ್ಲಿ ಪಿಯು ಕಾಲೇಜಿನ ನಿವೃತ್ತ ಪ್ರಾಚಾರ್ಯ ವಿ.ಜಿ.ಯಾವಗಲ್‌ರನ್ನು ಭಾನುವಾರ ಸನ್ಮಾನಿಸಲಾಯಿತು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ, ಪ್ರಾಚಾರ್ಯ ಪ್ರೊ.ಬಸವರಾಜ ಅಯೋಧ್ಯಾ ಇತರರಿದ್ದರು.  
ಜಿಲ್ಲೆ

ಶಿಕ್ಷಣದೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ

ಗಂಗಾವತಿ: ಉನ್ನತ ಶಿಕ್ಷಣದೊಂದಿಗೆ ಉದ್ಯೋಗ ಕಲ್ಪಿಸುವ ಜವಾಬ್ದಾರಿ ಶಿಕ್ಷಣ ಕೇಂದ್ರಗಳ ಮೇಲಿದ್ದು, ಕಲಿಕೆ ಮೂಲಕ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಜಿಎಚ್‌ಎನ್ ವಾಣಿಜ್ಯ ಪದವಿ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪದವಿ ಪ್ರದಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿರೀಕ್ಷಿತ ಗುರಿಯೊಂದಿಗೆ ಅಧ್ಯಯನದಲ್ಲಿ ಮುಂದುವರಿಯಬೇಕಿದ್ದು, ಶೈಕ್ಷಣಿಕ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣದೊಂದಿಗೆ ಉದ್ಯೋಗ ಕಲ್ಪಿಸುತ್ತಿರುವ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಪ್ರತಿ ವರ್ಷದ ಉದ್ಯೋಗ ಮೇಳ ಆಯೋಜಿಸುತ್ತಿರುವುದು ಇತರ ಸಂಸ್ಥೆಗಳಿಗೆ ಮಾದರಿ ಎಂದರು.

ಪ್ರಾಚಾರ್ಯ ಪ್ರೊ.ಬಸವರಾಜ ಅಯೋಧ್ಯಾ ಮಾತನಾಡಿ, ಪ್ರತಿವರ್ಷ ಉತ್ತಮ ಲಿತಾಂಶ ಬರುತ್ತಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅವಕಾಶ ಪಡೆದುಕೊಂಡಿದ್ದಾರೆ ಎಂದರು.

ಸಾನ್ನಿಧ್ಯವಹಿಸಿದ್ದ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಮಾತನಾಡಿದರು. ಕಾರ್ಯದರ್ಶಿ ಶರಣೇಗೌಡ ಮಾ.ಪಾಟೀಲ್, ಸಹಕಾರ್ಯದರ್ಶಿ ಎಚ್.ಎಂ.ಮಂಜುನಾಥ, ಪಿಯು ಕಾಲೇಜಿನ ನಿವೃತ್ತ ಪ್ರಾಚಾರ್ಯ ವಿ.ಜಿ.ಯಾವಗಲ್, ಉಪನ್ಯಾಸಕ ಕೆ.ಎಂ.ಬಸವರಾಜ ಸೇರಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಿದ್ದರು.