ಗಂಗಾವತಿ: ಅಧ್ಯಯನದ ಮೂಲಕ ವೃತ್ತಿಯನ್ನು ಪರಿಪೂರ್ಣಗೊಳಿಸುವುದರ ಜತೆಗೆ ನಿತ್ಯವೂ ಹೊಸದನ್ನು ಕಲಿಯಬೇಕಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಹೇಳಿದರು.
ನಗರದ ಜೆಎಂಎ್ಸಿ ಆವರಣದ ವಕೀಲರ ಸಂಘದ ಹಳೇ ಕಚೇರಿಯಲ್ಲಿ ತಾಲೂಕು ವಕೀಲರ ಸಂಘದಿಂದ ಆರಂಭಿಸಿರುವ ನವೀಕೃತ ಗ್ರಂಥಾಲಯ ಸೋಮವಾರ ಉದ್ಘಾಟಿಸಿ ಮಾತನಾಡಿದರು. ವಕೀಲ ವೃತ್ತಿ ಶ್ರೇಷ್ಠವಾಗಿದ್ದು, ಕಕ್ಷಿದಾರರಿಗೆ ನ್ಯಾಯಕೊಡಿಸುವ ಜವಾಬ್ದಾರಿ ವಕೀಲರ ಮೇಲಿದೆ. ಗ್ರಂಥಾಲಯ ಆರಂಭಿಸಿರುವುದು ಪ್ರಶಂಸನೀಯ ಎಂದರು.
ಸಂಘದ ಕಾರ್ಯದರ್ಶಿ ಎಚ್.ಎಂ.ಮಂಜುನಾಥ ಮಾತನಾಡಿ, ವಕೀಲ ವೃತ್ತಿಗೆ ಯುವಕರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಉತ್ತಮ ಬೆಳವಣಿಗೆ. ರಾಜ್ಯದ ವಿವಿಧ ಕೋರ್ಟ್‌ಗಳಲ್ಲಿ ಖಾಲಿಯಿರುವ ನ್ಯಾಯಾಧೀಶರ ಹುದ್ದೆ ಶೀಘ್ರವೇ ನೇಮಕ ನಡೆಯಲಿದೆ. ಅಕಾಂಕ್ಷಿಗಳಿಗೆ ವಕೀಲರ ಅನುಕೂಲಕ್ಕಾಗಿ ಗ್ರಂಥಾಲಯ ಆರಂಭಿಸಿದ್ದು, ಡಿಜಿಟಲ್ ಗ್ರಂಥಾಲಯಕ್ಕೂ ಆದ್ಯತೆ ನೀಡಲಾಗಿದೆ. ವಕೀಲರ ಹಿತಾಸಕ್ತಿ ಅನುಗುಣ ಕ್ರೀಯಾಶೀಲ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಹಿರಿಯ ಶ್ರೇಣಿ ನ್ಯಾಯಾಧೀಶ ರಮೇಶ ಗಾಣಿಗೇರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಸಂಘದ ಅಧ್ಯಕ್ಷ ಎಸ್.ಎನ್.ನಾಯಕ, ಉಪಾಧ್ಯಕ್ಷ ಪ್ರಕಾಶ ಕುಸಬಿ, ಖಜಾಂಚಿ ಬಿ.ಪುಷ್ಪಾ ಶ್ರೀನಿವಾಸ ಸೇರಿ ಹಿರಿಯ ವಕೀಲರು ಭಾಗವಹಿಸಿದ್ದರು.