ಬೆಂಗಳೂರಿನಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಜನಹೋರಾಟ ಕುರಿತು ಗಂಗಾವತಿ ತಾಲೂಕಿನ ಬಸಾಪಟ್ಟಣದಲ್ಲಿ ಕೈಗೆತ್ತಿಕೊಂಡ ನರೇಗಾ ಯೋಜನೆ ಕಾಮಗಾರಿ ಸ್ಥಳದಲ್ಲಿ ಎಸ್‌ಯುಸಿಐ ಜಿಲ್ಲಾ ಘಟಕದಿಂದ ಪ್ರಚಾರ ಕೈಗೊಳ್ಳಲಾಯಿತು. ಜಿಲ್ಲಾ ಸಂಚಾಲಕ ಶರಣು ಪಾಟೀಲ್, ಕಾರ್ಮಿಕರಾದ ಸೋಮವ್ವ, ಗಂಗಮಾಳವ್ವ, ನಾಗಪ್ಪ ತೋಟದ, ನಿಂಗಪ್ಪ, ಗ್ಯಾನಪ್ಪ, ನಾಗರಾಜ, ಸೋಮಪ್ಪ, ಮಾರುತೆಪ್ಪ, ಹನುಮಪ್ಪ, ಹನುಮವ್ವ, ಕರಿಯಪ್ಪ, ಈಶಪ್ಪ ಇತರರಿದ್ದರು.  
ಜಿಲ್ಲೆ

ಕಾರ್ಮಿಕರ ರಕ್ಷಣೆಗೆ ಯೋಜನೆ ರೂಪಿಸಲಿ

ಕುರುವತ್ತಿ ಶ್ರೀಕಾಂತಪ್ಪ

ಗಂಗಾವತಿ: ಖಾತರಿ ಯೋಜನೆಯಡಿ ಕೂಲಿ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 14ರಂದು ಬೆಂಗಳೂರಿನಲ್ಲಿ ರಾಜ್ಯ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಯುಸಿಐ ಜಿಲ್ಲಾ ಸಂಚಾಲಕ ಶರಣು ಪಾಟೀಲ್ ಹೇಳಿದರು.

ತಾಲೂಕಿನ ಬಸಾಪಟ್ಟಣದಲ್ಲಿ ಗ್ರಾಪಂನಿಂದ ಕೈಗೆತ್ತಿಕೊಂಡ ನರೇಗಾ ಯೋಜನೆ ಕಾಮಗಾರಿ ಸ್ಥಳದಲ್ಲಿ ಹೋರಾಟದ ಕುರಿತು ಭಾನುವಾರ ಪ್ರಚಾರ ಕೈಗೊಂಡರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದು, ಕಾರ್ಮಿಕರ ರಕ್ಷಣೆಗೆ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಲಾಗುವುದು.

ಗ್ರಾಮೀಣ ಉದ್ಯೋಗ ಖಾತ್ರಿಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮೀಣ ಕಷಿ ಕೂಲಿಕಾರರಿಗೆ ಕೂಲಿ 600 ರೂ. ಮಾನವ ದಿನಗಳನ್ನು 200ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆ ಹಲವು ಕುಟುಂಬಕ್ಕೆ ಆಸರೆಯಾಗಿದೆ. ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಉದ್ಯೋಗ ಖಾತ್ರಿ 370ರೂ,. ನಿಗದಿಯಾಗಿದ್ದರೂ, ಜೀವನ ನಡೆಸಲು ಸಾಕಾಗುತ್ತಿಲ್ಲ. ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸುವಂತೆ ಒತ್ತಾಯಿಸಿದರು.