ಸಿಐಟಿಯು ಜಿಲ್ಲಾ ಸಮಿತಿ ಹಮ್ಮಿಕೊಂಡ ಸಹಿ ಸಂಗ್ರಹ ಆಂದೋಲನಕ್ಕೆ ಗಂಗಾವತಿ ಬಾಬು ಜಗಜೀವನರಾಮ್ ವೃತ್ತದಲ್ಲಿ ಶುಕ್ರವಾರ ಚಾಲನೆ ದೊರೆಯಿತು. ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್, ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ ಇತರರಿದ್ದರು.  
ಜಿಲ್ಲೆ

ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ಒದಗಿಸಿ

ಗಂಗಾವತಿ: ಯೋಜನೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ಒದಗಿಸುವಂತೆ ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿ ಹಮ್ಮಿಕೊಂಡ ಸಹಿ ಸಂಗ್ರಹ ಆಂದೋಲನಕ್ಕೆ ನಗರದ ಬಾಬು ಜಗಜೀವನರಾಮ್ ವೃತ್ತದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಸಿಐಟಿಯು ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದು, ನಿಯಂತ್ರಿಸುವ ಜವಾಬ್ದಾರಿ ಕೇಂದ್ರಕ್ಕಿಲ್ಲ. ಹಲವು ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ, ಆಶಾ, ವಿವಿಧ ಯೋಜನೆ ಕಾರ್ಯಕಕರ್ತರು ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾಭದ್ರತೆ ಒದಗಿಸುತ್ತಿಲ್ಲ. ಕನಿಷ್ಠ ವೇತನ ಮರೀಚಿಕೆಯಾಗಿದ್ದು, ಪಿಂಚಣಿ ದೊರೆಯುತ್ತಿಲ್ಲ. ಸಾರ್ವಜನಿಕ ಕ್ಷೇತ್ರಗಳ ಖಾಸಗೀಕರಣ ಕೈಬಿಡಬೇಕಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ನಿಲ್ಲಿಸುವಂತೆ ಒತ್ತಾಯಿಸಿದರು.

ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ ಮಾತನಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹ ಆಂದೋಲನ ಹಮ್ಮಿಕೊಂಡಿದ್ದು, 2ಕೋಟಿ ಸಹಿ ಸಂಗ್ರಹಿಸುವ ಗುರಿಯಿದೆ ಎಂದರು.

ವಿವಿಧ ಸಂಘಟನೆ ಪದಾಧಿಕಾರಿಗಳಾದ ಮಂಜುನಾಥ ಡಗ್ಗಿ, ಮರಿನಾಗಪ್ಪ, ಬಾಳಪ್ಪ ಹುಲಿಹೈದರ್, ವಲಿಮೊಹಿದ್ದೀನ್, ಲಕ್ಷ್ಮೀದೇವಿ ಇತರರಿದ್ದರು.