ಜಿಲ್ಲೆ

ಜ್ಞಾನ ಹೆಚ್ಚಿಸಲಿದೆ ಸಮಾಜ ಶಾಸ್ತ್ರ

ಪ್ರವೀಣ ಉದುಸಾ ದಲಬಂಜನ್

ಗಂಗಾವತಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಾಜ ಶಾಸ ಐಚ್ಛಿಕ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಾಗ ಹಲವು ಉದ್ಯೋಗವಕಾಶಗಳು ದೊರೆಯಲಿವೆ ಎಂದು ಕುಷ್ಟಗಿ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ನಾಗೇಂದ್ರಪ್ಪ ಹೇಳಿದರು.

ನಗರದ ಎಸ್‌ಕೆಎನ್‌ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಮಾಜಶಾಸ ವಿಭಾಗ ಮತ್ತು ಐಕ್ಯುಎಸಿ ಘಟಕದಿಂದ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಾಗಾರದಲ್ಲಿ ಮಾತನಾಡಿದರು. ಸ್ಪರ್ಧಾತ್ಮಕ ಜೀವನದಲ್ಲಿ ಸಮಾಜ ಶಾಸ ಕಲಿಕೆ ಜ್ಞಾನ ಹೆಚ್ಚಿಸುತ್ತಿದ್ದು, ಉನ್ನತ ಹುದ್ದೆ ಬಯಸುವ ಉದ್ಯೋಗಾಂಕ್ಷಿಗಳು ಸಮಾಜಶಾಸ ವಿಷಯವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸಮಾಜ ಶಾಸವು ಮಾನವೀಯ ಮೌಲ್ಯಗಳನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ ಎಂದರು.

ಪ್ರಾಚಾರ್ಯೆ ಡಾ.ಮುಮ್ತಾಜ್ ಬೇಗಂ ಮಾತನಾಡಿ, ಕಲಿಕೆಯಲ್ಲಿ ಆಸಕ್ತಿ ಹೆಚ್ಚಾದಾಗ, ವಿಷಯ ಮನನ ಮಾಡಿಕೊಳ್ಳಲು ಸಾಧ್ಯ. ಸಮಾಜ ಶಾಸ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿದ್ದಾರೆ ಎಂದರು. ಐಕ್ಯುಎಸಿ ಸಂಚಾಲಕ ಡಾ.ಶಿವಕುಮಾರ ಗುರಿಕಾರ್, ಸಹ ಸಂಚಾಲಕ ದೊರೈಬಾಬು, ಪತ್ರಾಂಕಿತ ವ್ಯವಸ್ಥಾಪಕಿ ರಾಘಮ್ಮ, ಸಮಾಜ ಶಾಸ ವಿಭಾಗದ ಮುಖ್ಯಸ್ಥ ಬಿ.ಣಿರಾಜ್, ಪ್ರಾಧ್ಯಾಪಕ ಡಾ. ಸೋಮಶೇಖರ್ ಜೇಕಿನ್ ಇತರರಿದ್ದರು.