ಗಂಗಾವತಿ ತಾಪಂ ಕಚೇರಿ ಮುಂದೆ ಎಸ್‌ಎಫ್ಐ ತಾಲೂಕು ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.  
ಜಿಲ್ಲೆ

ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಿ: ಗಂಗಾವತಿಯಲ್ಲಿ ಎಸ್‌ಎಫ್ಐ ತಾಲೂಕು ಸಮಿತಿ ಪ್ರತಿಭಟನೆ

ಗಂಗಾವತಿ: ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಎಫ್ಐ ತಾಲೂಕು ಸಮಿತಿ ಸದಸ್ಯರು ನಗರದ ತಾಪಂ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಮಿತಿ ಅಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಿದ್ದು, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆ ಈವರೆಗೆ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ. ಹಾಸ್ಟೆಲ್‌ನಲ್ಲಿ ಇನ್ನೂ ಪ್ರವೇಶವಕಾಶವಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹಾಸ್ಟೆಲ್ ಕೊರತೆಯಿಂದ ಕೆಲವರು ಶಿಕ್ಷಣ ಮೊಟಕುಗೊಳಿಸಿದ್ದಾರೆ. ಮೀಸಲು ಹಾಸ್ಟೆಲ್‌ಗಳಲ್ಲಿ ಹಿಂದುಳಿದ ವರ್ಗದವರಿಗೆ ಶೇ.25 ಅವಕಾಶ ನೀಡುವಂತೆ ಕಾಯ್ದೆಯಲ್ಲಿದ್ದರೂ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ತಾಪಂ ಇಒ ಮಹಾಂತಗೌಡ ಪಾಟೀಲ್‌ಗೆ ಮನವಿ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ಗ್ಯಾನೇಶ ಕಡಗದ್, ಪದಾಧಿಕಾರಿಗಳಾದ ಶಿವಕುಮಾರ, ಯು.ನಾಗರಾಜ್, ಸಂಗೀತಾ, ನಾಗರತ್ನಾ, ರಫಿ, ವೀರೇಶ, ದೇವಣ್ಣ, ಪಲ್ಲವಿ, ಗೀತಾ,ದೇವಮ್ಮ ಇತರರಿದ್ದರು.