ಅನಧಿಕೃತ ಲೇಔಟ್‌ಗಳ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸದಸ್ಯರು ಗಂಗಾವತಿ ಗ್ರೇಡ್2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಸೋಮವಾರ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಹುಲಿಗೇಶ, ಯಲ್ಲಪ್ಪ, ಮಲ್ಲಿಕಾರ್ಜುನ ಹಗೇದಾಳ್, ಹಂಪೇಶ ಹರಿಗೋಲು, ಅತಾ ಸಂಪಂಗಿ, ಆರ್ೀ ಇತರರಿದ್ದರು. 
ಜಿಲ್ಲೆ

ಅನಧಿಕೃತ ಲೇಔಟ್ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಿ

ಗಂಗಾವತಿ: ನಗರದಲ್ಲಿ ಹೆಚ್ಚುತ್ತಿರುವ ಅನಧಿಕೃತ ಲೇಔಟ್‌ಗಳ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸದಸ್ಯರು ನಗರದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್‌ಗೆ ಮನವಿ ಸಲ್ಲಿಸಿದರು.

ಸಮಿತಿ ಜಿಲ್ಲಾಧ್ಯಕ್ಷ ಸಿ.ಕೆ.ಮರಿಸ್ವಾಮಿ ಬರಗೂರು ಮಾತನಾಡಿ, ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತ ಲೇಔಟ್‌ಗಳಾಗಿದ್ದು, ಸ.ನಂ.176ರಲ್ಲಿನ ಲೇಔಟ್‌ಗಳಿಗೆ ಯಾವುದೇ ಪರವಾನಗಿಯಿಲ್ಲ. ಕೃಷಿಯೇತರ ಭೂಮಿಯನ್ನಾಗಿ ಪರಿವರ್ತಿಸದೇ ನಿವೇಶನಗಳನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಅಧಿಕೃತ ದಾಖಲೆಗಳಿಲ್ಲ. ರಸ್ತೆ, ವಿದ್ಯುತ್ ದೀಪ, ಚರಂಡಿ ಸೇರಿ ಯಾವುದೇ ಮೂಲ ಸೌಲಭ್ಯಗಳಿಲ್ಲ. ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ಹಕ್ಕುಪತ್ರಗಳ ಸಮಸ್ಯೆ ಎದುರಾಗಿದೆ. ಅನಧಿಕೃತ ಲೇಔಟ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದ್ದರೂ, ನಗರಸಭೆ ಅಧಿಕಾರಿಗಳು ಗಂಭೀರ ಪರಿಗಣಿಸುತ್ತಿಲ್ಲ. ಮುಗ್ಧ ಜನರನ್ನು ವಂಚಿಸುತ್ತಿರುವ ಮಾಲೀಕರು ಮತ್ತು ಸಹಕರಿಸುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪದಾಧಿಕಾರಿಗಳಾದ ಹುಲಿಗೇಶ, ಯಲ್ಲಪ್ಪ, ಮಲ್ಲಿಕಾರ್ಜುನ ಹಗೇದಾಳ್, ಹಂಪೇಶ ಹರಿಗೋಲು, ಅತಾ ಸಂಪಂಗಿ, ಆರ್ೀ ಇತರರಿದ್ದರು.