ವೆಂಕಟೇಶ 
ಜಿಲ್ಲೆ

ಗಂಗೊಳ್ಳಿ ಸೊಸೈಟಿಗೆ 1.14 ಕೋಟಿ ನಿವ್ವಳ ಲಾಭ

ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ 2024-25ನೇ ಸಾಲಿನಲ್ಲಿ 677 ಕೋಟಿ ರೂ. ವ್ಯವಹಾರ ನಡೆಸಿದ್ದು, 1.14 ಕೋಟಿ ರೂ. ನಿವ್ವಳ ಲಾಭ ಗಳಿಸಿ, ಕಳೆದ 4ನೇ ವರ್ಷದಿಂದ 1 ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ತಿಳಿಸಿದ್ದಾರೆ.

ಸಂಘದ ವಾರ್ಷಿಕ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.17 ಏರಿಕೆ ಕಂಡಿದೆ. 3 ಶಾಖೆ ಹೊಂದಿರುವ ಸಂಘ ವರ್ಷಾಂತ್ಯಕ್ಕೆ 85.56 ಕೋಟಿ ರೂ. ಠೇವಣಿ, 82 ಕೋಟಿ ರೂ. ಸದಸ್ಯರ ಸಾಲ, 2.66 ಕೋಟಿ ರೂ. ಪಾಲು ಬಂಡವಾಳ, 5.96 ಕೋಟಿ ರೂ. ಲಾಭದಿಂದ ವಿಂಗಡಿಸಿದ ನಿಧಿ ಹೊಂದಿದ್ದು, 24.53 ಕೋಟಿ ರೂ. ಸಹಕಾರಿ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲಾಗಿದೆ. ವರ್ಷಾಂತ್ಯಕ್ಕೆ 100 ಕೋಟಿ ದುಡಿಯುವ ಬಂಡವಾಳ ಹೊಂದಿರುವ ಉಡುಪಿ ಜಿಲ್ಲೆಯ ಪ್ರಥಮ ಸೌಹಾರ್ದ ಸಹಕಾರಿ ಸಂಘವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಂಘದ 3 ಶಾಖೆಗಳಲ್ಲೂ ಕೋರ್ ಬ್ಯಾಂಕಿಂಗ್ ಅಳವಡಿಸಲಾಗಿದ್ದು, ಮೊಬೈಲ್ ಆ್ಯಪ್ ಮೂಲಕ ಪಿಗ್ಮಿ ಸಂಗ್ರಹಣೆ ಮಾಡಿದ ಹಾಗೂ ಸದಸ್ಯರ ಎಲ್ಲ ವ್ಯವಹಾರಗಳ ವಿವರಗಳಿಗೆ ವಾಟ್ಸಾೃಪ್ ಸಂದೇಶ ಕಳುಹಿಸಿದ ಜಿಲ್ಲೆಯ ಪ್ರಥಮ ಸಹಕಾರ ಸಂಘ ಎಂದರು.

ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸಾರ್ವಜನಿಕ ಉಪಕಾರ ನಿಧಿಯಿಂದ ಹಲವಾರು ಸಮಾಜಮುಖಿ ಸೇವಾ ಕಾರ್ಯ ಕೈಗೊಂಡು ಪರಿಸರದ ಜನರ ಮನ್ನಣೆ ಪಡೆದಿರುವ ಸಂಘ ತ್ವರಿತಗತಿಯ ಗ್ರಾಹಕ ಸೇವೆಗೆ ಹೆಸರುವಾಸಿ.