ಜಿಲ್ಲೆ

ಗಾಣಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಯ್ಕೆ


ಗುಂಡ್ಲುಪೇಟೆ : ಸಮಾಜವನ್ನು ಸಂಘಟಿಸುವ ಸಲುವಾಗಿ ತಾಲೂಕು ಮಟ್ಟದಲ್ಲಿ ಗಾಣಿಗರ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಂಘದ ಅಧ್ಯಕ್ಷ ಜಿ.ರಾಮು ಹೇಳಿದರು.ಗುರುವಾರ ಪಟ್ಟಣದ ಖಾಸಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಣಿಗ ಸಮುದಾಯದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ಸಮುದಾಯವು ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಲಾಗುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಸಂಘಟನೆ ಮೂಲಕ ಸಮದಾಯದ ಏಳಿಗೆಗಾಗಿ ಸಮುದಾಯ ಭವನ ನಿರ್ಮಿಸಲಾಗುವುದು. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಚಟುವಟಿಕೆ ಮಾಡಲಾಗುವುದು ಎಂದು ಹೇಳಿದರು.ಇದೆ ಸಂದರ್ಭ ಸಂಘದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಚಿಕ್ಕಸುಬ್ಬಶೆಟ್ಟಿ, ಕಾರ್ಯಾಧ್ಯಕ್ಷರಾಗಿ ಎಂ ಮಲ್ಲಿಕಾರ್ಜುನ, ಉಪಾಧ್ಯಕ್ಷರಾಗಿ ಭೈರೇಶ್ ಗಾಣಿಗ, ಎಚ್.ಎಸ್.ನಂಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಶೆಟ್ಟಿ, ಖಜಾಂಚಿಯಾಗಿ ಜಿ.ಎಂ. ಶಿವಕುಮಾರ್, ಸಹ ಕಾರ್ಯದರ್ಶಿ ಕೃಷ್ಣ, ಸಂಘಟನಾ ಕಾರ್ಯದರ್ಶಿಯಾಗಿ ಬಿ.ಸಿದ್ದಶೆಟ್ಟಿ, ನಾಗರಾಜು ಆಯ್ಕೆಯಾದರು.