ಜಿಲ್ಲೆ

ಗಾಂಜಾ ಮಾರಾಟ ಆರೋಪಿ ಬಂಧನ

ಸೌಮ್ಯ ಆರ್

ಮೂಡುಬಿದಿರೆ: ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮುಹಮ್ಮದ್ ರಫೀಕ್ ಎಂಬಾತನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಈತ ಮೂಡುಬಿದಿರೆ ಸಮೀಪದ ಮೂಡುಕೊಣಾಜೆ ಗ್ರಾಮದ ಕೈಕಂಜಿಪಡ್ಪು ಸೇತುವೆ ಬಳಿ ಗಾಂಜಾ ಮಾರಾಟ ಮಾಡಲೆತ್ನಿಸುತ್ತಿದ್ದ ಮಾಹಿತಿ ಪಡೆದ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 900 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.