ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಿಸಿದ ಪ್ರಕರಣದ ಆರೋಪಿ, ತಲಶ್ಯೇರಿ ಮುಳಪ್ಪಿಲಂಗಾಡ್ ನಿವಾಸಿ ಕೆ.ವಿ.ಅರ್ಷಾದ್ ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಮೂರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣ ಇತರ ಇಬ್ಬರು ಆರೋಪಿಗಳಾದ ಎನ್.ಕೆ.ಸಲ್ಮಾನ್ ಹಾಗೂ ಕೆ. ಮಹಮ್ಮದ್ ಶರೀಫ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ.