ಜಿಲ್ಲೆ

8 ಕಿ.ಗ್ರಾಂ ಗಾಂಜಾ ಪತ್ತೆ

Dakshina Kannada

ಮಂಗಳೂರು: ಸುಳ್ಯ ಬಳಿ ಸ್ವಿಫ್ಟ್ ಕಾರಿನಲ್ಲಿ 8.200 ಕಿ. ಗ್ರಾಂ ಗಾಂಜಾ ಸಾಗಾಟಮಾಡುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸರು,ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಸರಗೋಡು ಮುಂಡೋಳು ಅಟ್ಟಂಚಾಲ್ ಮುರುವ ಮನೆ ಎಂ.ಎ.ಅಬ್ಬಾಸ್(60) ಹಾಗು ಮೊಯಿನಾಬಾದ್ ಅಬ್ದುಲ್ ಕುಂಞಿ (50) ಬಂಧಿತರು. ಆರೋಪಿಗಳಿಂದ ವಶಪಡಿಸಿಕೊಂಡ ಗಾಂಜಾಮೌಲ್ಯ 2 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಸಾಗಾಟಕ್ಕೆ ಬಳಸಿದ ಸ್ವಿಫ್ಟ್ ಕಾರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಮಾರ್ಗದರ್ಶನದಲ್ಲಿ ಪಿಎಸ್‌ಐ ಹರೀಶ್ ಎಂ.ಆರ್.ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಮಾಡಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.