ಬೆಳಗಾವಿ: ಧಾರವಾಡ ಹೈಕೋರ್ಟ್ ಬಳಿ ಬುಧವಾರ ಸಂಬನವಿಸಿದ ರಸ್ತೆ ಅಪಘಾತದಲ್ಲಿ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಮದ್ಯ ಉರುಳಿಬಿದ್ದ ಅನಿಲ ಸೋರಿಕೆಯಾಗುತ್ತಿರುವ ಹಿನ್ನೆಲೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಆಗಿದೆ.
ಹೆದ್ದಾರಿ ಮಧ್ಯದಲ್ಲಿ ಗ್ಯಾಸ್ ಟ್ಯಾಂಕರ್ ಬಿದ್ದ ಅನಿಲ ಸೋರಿಕೆಯಾಗುತ್ತಿರುವುದರಿಂದ ಧಾರವಾಡ ಹೈಕೋರ್ಟ್ ದಿಂದ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ವರೆಗೆ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಅಲ್ಲದೆ, ಮುಂದಿನ ಆರು ಗಂಟೆಗಳ ಕಾಲ ತಾತ್ಕಾಲಿಕ ವಾಗಿ ಸಂಚಾರ ಬಂದ್ ಮಾಡಲಾಗಿದೆ. ಪರಿಣಾಮ ಸಂಜೆ 6 ಗಂಟೆಯಿಂದ ಹೆದ್ದಾರಿಯಲ್ಲಿ ವಾಹನಗಳು ನಿಲ್ಲಿಸಲಾಗಿದೆ. ಪರಿಣಾಮ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರು, ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.