ಜಿಲ್ಲೆ

ಮೈಸೂರಿನಲ್ಲಿ ಗ್ಯಾಸ್ ರೀಫಿಲ್ಲಿಂಗ್ : ನಾಲ್ವರು ಆರೋಪಿಗಳು ವಶಕ್ಕೆ

ಸದೇಶ್ ಕಾರ್ಮಾಡ್

ಮೈಸೂರು: ವಿವಿಧ ಕಂಪನಿಗಳ ಗ್ಯಾಸ್ ದಾಸ್ತಾನು ಮಾಡಿಕೊಂಡು ರೀಫಿಲ್ಲಿಂಗ್ ಮಾಡುತ್ತಿದ್ದ 4 ಜನರನ್ನು ಇತ್ತೀಚೆಗೆ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು 127 ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಸಿಲಿಂಡರ್‌ಗಳ ಜತೆಗೆ 79 ರಾಡುಗಳು, 2 ಡಿಜಿಟಲ್ ಯಂತ್ರಗಳು 1 ಗೂಡ್ಸ್ ವಾಹವನ್ನು ವಶಕ್ಕೆ ಪಡೆಯಲಾಗಿದೆ. ನಗರದ ನಗರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಕೆಸರೆ ಶೆಡ್‌ನಲ್ಲಿ ಅಕ್ರಮವಾಗಿ ಸಿಲಿಂಡರ್‌ಗಳನ್ನು ದಾಸ್ತಾನು ಇರಿಸಿ ರೀಫಿಲ್ಲಿಂಗ್ ಮಾಡಲಾಗುತಿತ್ತು. ಅಡುಗೆ ಅನಿಲ ಸಿಲಿಂಡರ್‌ಗಳನ್ನು ಆರೋಪಿಗಳು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದರು.