ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್‌ಗೆ ಬಿದ್ದಿರುವುದು 
ಜಿಲ್ಲೆ

ಗ್ಯಾಸ್ ಟ್ಯಾಂಕರ್ ಪಲ್ಟಿ

ಇಂದಿರಾ ಎನ್ ಕೆ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್‌ಗೆ ಬಿದ್ದ ಘಟನೆ ರಾ.ಹೆ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲೀಕೇಜ್ ಇಲ್ಲದೆ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಸುರಕ್ಷಾ ಕ್ರಮ ಕೈಗೊಂಡರು. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.