ಜಿಲ್ಲೆ

ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬೆಂಗಳೂರು: ಜಿಎಯುಸಿಜಿ ಅಸೋಸಿಯೇಷನ್ ಮಿಲ್ಲರ್ಸ್‌ ರಸ್ತೆ ಮಣಿಪಾಲ್ ಆಸ್ಪತ್ರೆ ಮತ್ತಿತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಉಚಿತ ಆರೋಗ್ಯ ಮಹಾ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ಶ್ರೀರಾಮಪುರದ ಗಾಂಧಿ ಸ್ಕೂಲ್ ಮುಂಭಾಗ ಇರುವ ಜಿಎಯುಸಿಜಿ ಅಸೋಸಿಯೇಷನ್‌ನ ಹಿಮಾಲಯ ಸಭಾಂಗಣದಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಶಸ ಚಿಕಿತ್ಸೆ ಹಾಗೂ ದಂತ ಚಿಕಿತ್ಸೆಯನ್ನು ಮಾಡಲಾಗುತ್ತದೆ. ರಕ್ತಪರೀಕ್ಷೆ, ಇಸಿಜಿ. ಎಕೊ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುತ್ತದೆ. ಬೆಳಗ್ಗೆ 9 ರಿಂದ 2 ರವರೆಗೆ ಶಿಬಿರ ನಡೆಯಲಿದೆ.

ಶಿಬಿರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದು, ಮಾರುತಿ ಮೆಡಿಕಲ್ಸ್ ಮಾಲೀಕ ಮಹೇಂದರ್ ಮುನ್ನೊತ್, ಮಣಿಪಾಲ್ ಆಸ್ಪತ್ರೆ ನಿರ್ದೇಶಕ ಮನೀಷ್ ತ್ರಿವೇದಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಲಯನ್ಸ್ ಕೇಶವ ಮೂರ್ತಿ, ಡಾ. ಪದ್ಮಿನಿ ಪ್ರಸಾದ್, ಡಾ. ಶ್ರೀವತ್ಸ ಜಿ ಮತ್ತಿತರರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.