ಮಹಾಗಣಪತಿ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಮೇಳದೊಂದಿಗೆ ಇಂಜಿಲಗೆರೆ ಹಾಗೂ ಪುಲುಯೇರಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. 
ಜಿಲ್ಲೆ

ಇಂಜಿಲಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ

ನಾಗೇಶ ಎಸ್

ಸಿದ್ದಾಪುರ: ಪುಲಿಯೇರಿ ಗ್ರಾಮದ ಇಂಜಿಲಗೆರೆಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ದ್ವಿತೀಯ ವರ್ಷದ ಗೌರಿ-ಗಣೇಶೋತ್ಸವ ವಿಸರ್ಜನಾ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಉತ್ಸವದ ಅಂಗವಾಗಿ ಮಹಾಪೂಜೆ, ಮಹಾ ಮಂಗಳಾರತಿ ನಡೆಯಿತು. ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಮಧ್ಯಾಹ್ನದ ಬಳಿಕ ಮಹಾಗಣಪತಿ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಮೇಳದೊಂದಿಗೆ ಇಂಜಿಲಗೆರೆ ಹಾಗೂ ಪುಲುಯೇರಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು.

ಈ ಸಂದರ್ಭದಲ್ಲಿ ವಿನಾಯಕ ಮಿತ್ರ ಮಂಡಳಿಯ ಪದಾಧಿಕಾರಿಗಳಾದ ರತೀಶ್ ಕೆ.ಆರ್, ಶಶಿಕುಮಾರ್, ಸುದೀಶ್, ಮನೀಶ್, ರಜೀಶ್ ನೂತನ್, ಶರತ್, ಗ್ರಾಮಸ್ಥರು ಪಾಲ್ಗೊಂಡಿದ್ದರು.