ಜಿಲ್ಲೆ

ಗಾಯನ ಸಮಾಜದ 54ನೇ ಸಂಗೀತ ಸಮ್ಮೇಳನ ನ. 3ರಿಂದ

ಪಂಕಜ ಕೆ.ಎಂ.

ಬೆಂಗಳೂರು: ಬೆಂಗಳೂರು ಗಾಯನ ಸಮಾಜದ 54ನೇ ಸಂಗೀತ ಸಮ್ಮೇಳನಾಧ್ಯಕ್ಷರಾಗಿ ಸಂಗೀತ ತಜ್ಞ ವಿದ್ವಾನ್ ಡಾ. ಎಸ್.ಸಿ. ಶರ್ಮ ಆಯ್ಕೆಯಾಗಿದ್ದಾರೆ. ಇವರ ನೇತೃತ್ವದಲ್ಲಿ ಕೆ.ಆರ್. ರಸ್ತೆಯ ಗಾಯನ ಸಮಾಜದಲ್ಲಿ ನ. 3ರಿಂದ 10ರವರೆಗೆ ಸಮ್ಮೇಳನ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಗೀತ ವಿದ್ವಾಂಸರಿಂದ ಸೋದಾಹರಣ ಭಾಷಣ, ಪ್ರಾತ್ಯಕ್ಷಿಕೆ, ಚರ್ಚಾಗೋಷ್ಠಿಗಳು ನಡೆಯಲಿವೆ. ಪ್ರಸಿದ್ಧ ಕಲಾವಿದರಿಂದ ಹಾಗೂ ಉದಯೋನ್ಮುಖ ಪ್ರತಿಭೆಗಳಿಂದ ಸಂಗೀತ ಕಛೇರಿ ಏರ್ಪಡಿಸಲಾಗಿದೆ. ಸಮ್ಮೇಳನಾಧ್ಯಕ್ಷರಿಗೆ ಪ್ರತಿಷ್ಠಿತ ‘ಸಂಗೀತ ಕಲಾರತ್ನ’ ಬಿರುದು ಹಾಗೂ ಉಡುಪಿಯ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಗೆ ‘ ಕರ್ನಾಟಕ ಕಲಾಚಾರ್ಯ’ ಬಿರುದನ್ನು ನೀಡಿ ಗೌರವಿಸಲಾಗುವುದು ಎಂದು ಗಾಯನ ಸಮಾಜದ ಅಧ್ಯಕ್ಷ ಡಾ.ಎಂ.ಆರ್.ವಿ. ಪ್ರಸಾದ್ ತಿಳಿಸಿದ್ದಾರೆ.