ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ದೇಯಿ ಬೈದೆದಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1ರಿಂದ 5ರ ತನಕ ನಡೆಯುವ ವಾರ್ಷಿಕ ಜಾತ್ರಾಮಹೋತ್ಸವ ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪುದುವೆಟ್ಟು ಶ್ರೀ ಗುರು ನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿಯ ಭಕ್ತರ ಸಮಾಲೋಚನಾ ಸಭೆ ನಡೆಯಿತು.
ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಲೋಕಯ್ಯ ಪೂಜಾರಿ ಅಧ್ಯಕ್ಷತೆ ವಹಿಸಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿ ಬೆಳ್ತಂಗಡಿ ತಾಲೂಕು ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ, ಉತ್ಸವದ ಮಾಹಿತಿ ನೀಡಿ ತಾಲೂಕಿನ ಭಕ್ತರನ್ನು ಆಮಂತ್ರಿಸಿದರು.
ಪುದುವೆಟ್ಟು ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಮಿಯಾರು ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸಂಘ ಮಾಜಿ ಅಧ್ಯಕ್ಷ ರಂಗನಾಥ, ಪುದುವೆಟ್ಟು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಉಮ್ಮಕ್ಕ, ಪುದುವೆಟ್ಟು ಶ್ರೀ ಗುರು ನಾರಾಯಣ ಸೇವಾ ಸಂಘ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಸದಸ್ಯರಾದ ವಿಶ್ವನಾಥ, ತಿಮ್ಮಪ್ಪ ಪೂಜಾರಿ, ರಮೇಶ್ ಪೂಜಾರಿ, ವಸಂತ ಪೂಜಾರಿ, ಹರಿಣಾಕ್ಷಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಭಕ್ತರು ಭಾಗವಹಿಸಿದ್ದರು.
ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿ ಧರ್ಮಸ್ಥಳ ವಲಯ ಸಂಚಾಲಕ ಲಿಂಗಪ್ಪ ಸಾಲಿಯಾನ್ ಪುದುವೆಟ್ಟು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಮಮತಾ ಕೆ.ನಿರೂಪಿಸಿದರು. ಪುದುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಪಾಧ್ಯಕ್ಷ ಹರೀಶ್ ವಂದಿಸಿದರು.