ಗಂಗಾವತಿ ತಾಲೂಕಿನ ವಡ್ಡರಹಟ್ಟಿಕ್ಯಾಂಪ್ ಸ.ಹಿ.ಪ್ರಾ.ಶಾಲೆಯಲ್ಲಿ ಶಾಲಾಶಿಕ್ಷಣ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಇಸ್ಲಾಂಪುರ ಪಶ್ಚಿಮ ವಲಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ವಿವಿಧ ಶಾಲೆಗಳ ಮಕ್ಕಳು ಛದ್ಮವೇಶದಾರರಾಗಿ ಗಮನ ಸೆಳೆದರು. 
ಜಿಲ್ಲೆ

ಪ್ರತಿಭಾವಂತರು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲಿ

ಗಂಗಾವತಿ: ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣವಿದ್ದು, ಪ್ರತಿಭೆಗಳು ರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡಿದ್ದಾರೆ ಎಂದು ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ಹೇಳಿದರು.

ತಾಲೂಕಿನ ವಡ್ಡರಹಟ್ಟಿಕ್ಯಾಂಪ್ ಸ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಇಸ್ಲಾಂಪುರ ಪಶ್ಚಿಮ ವಲಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದಿಂದ ಪ್ರತಿಯೊಂದು ಹಕ್ಕು ಮತ್ತು ಗೌರವವನ್ನು ಪಡೆಯಬಹುದಾಗಿದೆ.

ಗ್ರಾಮೀಣ ಭಾಗದ ಶಾಲೆಗಳ ಉನ್ನತೀಕರಣಕ್ಕಾಗಿ ಶಿಕ್ಷಕರು ಶ್ರಮಿಸುತ್ತಿದ್ದು, ಸಂಸ್ಥೆಯಿಂದ ಸ್ಮಾರ್ಟ್ ಟಿವಿಗಳನ್ನು ಒದಗಿಸಲಾಗಿದೆ ಎಂದರು.
ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊ.ಪಾಟೀಲ್ ಮಾತನಾಡಿ, ಪ್ರತಿಭೆಗಳ ಅನಾವರಣಕ್ಕೆ ಕಲೋತ್ಸವ ಪೂರಕವಾಗಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆ ಸಲಹೆ ನೀಡಿದರು.

ಕಲೋತ್ಸವದಲ್ಲಿ 16 ಶಾಲೆಗಳ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ, ಮಾಜಿ ಅಧ್ಯಕ್ಷ ಚಾಂದ್‌ಪಾಶಾ, ಬಿಆರ್‌ಸಿ ಮಂಜುನಾಥ ವಸದ್, ಎಸ್ಡಿಎಂಸಿ ಅಧ್ಯಕ್ಷ ದುರುಗಪ್ಪ ನಡುಲಮನಿ,
ಮುಖಂಡ ಟಿ.ದುರುಗಪ್ಪ ನಾಯಕ, ಮುಖ್ಯಶಿಕ್ಷಕ ಎಸ್.ಎಂ.ಸದಾನಂದ ಮತ್ತು ಶಿಕ್ಷಕರಿದ್ದರು.