ಕೂಡ್ಲಿಗಿ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿದರು. ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಪಂಚಮಸಾಲಿ ಸಮಾಜದ ತಾಲೂಕು ಅಧ್ಯಕ್ಷ ಹೊಂಬಾಳೆ ರೇವಣ್ಣ, ಕಾರ್ಯದರ್ಶಿ ರಮೇಶ ಇತರರಿದ್ದರು. 
ಜಿಲ್ಲೆ

ಮಹನೀಯರ ವಿಚಾರಧಾರೆ ಅಳವಡಿಸಿಕೊಳ್ಳಲಿ

ರುದ್ರಪ್ಪ ವಾಲಿ

ಕೂಡ್ಲಿಗಿ: ಮಹನೀಯರ ಜಯಂತಿಗಳನ್ನು ಆಚರಣೆಗೆ ಸೀಮಿತಗೊಳಿಸದೆ ತತ್ವಾದರ್ಶಗಳನ್ನು ಪಾಲಿಸೋಣ ಎಂದು ತಹಸೀಲ್ದಾರ್ ವಿ.ಕೆ.ನೇತ್ರಾವತಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಆಡಳಿತದಿಂದ ಅ.23 ರಂದು ಹಮ್ಮಿಕೊಂಡಿರುವ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಯಂತಿಯನ್ನು ಆಚರಿಸಿದರೆ ಮೊದಲು ಶಿಷ್ಟಾಚಾರಕ್ಕೆ ಆದ್ಯತೆ ನೀಡಬೇಕು. ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯ. ಅ. 23ರಂದು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮ ಭಾವಚಿತ್ರವಿರುವ ಅಲಂಕೃತ ಬೆಳ್ಳಿ ರಥಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗುವರು. ಮೆರವಣಿಗೆಯಲ್ಲಿ ವಿವಿಧ ಬಗೆಯ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪ್ರವಾಸಿ ಮಂದಿರ ಆವರಣದಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಾಗುವುದು ಎಂದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಸುನೀಲ್ ಗೌಡ, ಮುಖಂಡರಾದ ಟಿ.ಜಿ.ಮಲ್ಲಿಕಾರ್ಜುನ ಗೌಡ, ಪಿ.ರಜನಿಕಾಂತ, ಎಸ್.ದುರುಗೇಶ್, ಕೆ.ಎಸ್.ವೀರೇಶ, ಎರಿಸ್ವಾಮಿ, ಖಾನವಳಿ ಕೊಟ್ರೇಶಣ್ಣ ಇತರರಿದ್ದರು.