ಜಿಲ್ಲೆ

ಭೌಗೋಳಿಕ, ರಾಜಕೀಯ ಸ್ವಾಯತ್ತತೆ ಕೊಡವರ ಸಂವಿಧಾನಬದ್ಧ ಹಕ್ಕು

ಮಡಿಕೇರಿ:

'ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಭಾನುವಾರ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 29ನೇ ವರ್ಷದ ಸಾರ್ವತ್ರಿಕ ಕೈಲ್ ಪೊಳ್ದ್ ಹಬ್ಬ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕಲಂ 244ರ ಅಡಿಯಲ್ಲಿ ಕೊಡವರಿಗೆ ಸ್ವಯಂ ಆಡಳಿತದ ಅಗತ್ಯವನ್ನು ತಿಳಿಸಿದರು. ಕೊಡವರು ಕೊಡವಸೀಮೆಯ ಪುರಾತನ ಬುಡಕಟ್ಟು ಜನರಾಗಿರುವುದರಿಂದ, ಸಂವಿಧಾನದ ಖಾತರಿಗಳ ಮೂಲಕ ಈ ಮಣ್ಣಿನ ರಾಜಕೀಯ ಬಲ, ನೆಲ, ಜಲ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ನಿರ್ಧರಿಸುವ ಹಕ್ಕನ್ನು ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವರ ಅಮೋಘ ಸೇವೆಗಾಗಿ ಮತ್ತು ರಾಷ್ಟç ನಿರ್ಮಾಣದ ಅಪಾರ ಕೊಡುಗೆಗಾಗಿ ಋಣಿಯಾಗಿರಬೇಕು ಎಂದರು.

ಅಸಹಾಯಕ ಕೊಡವರ ಶಕ್ತಿಯಂತಿರುವ ಸಿಎನ್‌ಸಿಯ ಬಹುಕಾಲದ ಬೇಡಿಕೆಯನ್ನು ಈಡೇರಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದ್ದು, ಇದನ್ನು ಅತ್ಯಂತ ಆದ್ಯತೆ ಮತ್ತು ಮಾನವೀಯ ಧೋರಣೆಯೊಂದಿಗೆ ಪರಿಹರಿಸಬೇಕು. ಕೊಡವರ ಆಕಾಂಕ್ಷೆಗಳನ್ನು ಸಿಎನ್‌ಸಿ ಸಂಘಟನೆ ಇಷ್ಟು ದಿನ ಜೀವಂತವಾಗಿರಿಸಿಕೊAಡಿರುವುದು ಶ್ಲಾಘನೀಯ ಸಾಧನೆಯಾಗಿದೆ. ಹುಟ್ಟುವ ಪ್ರತಿಯೊಬ್ಬ ಕೊಡವ ನೈತಿಕ, ಆರ್ಥಿಕ ಮತ್ತು ದೈಹಿಕವಾಗಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು ಹಾಗೂ ವಿಸ್ತರಿಸಬೇಕು. ಸೈದ್ಧಾಂತಿಕವಾಗಿ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿರುವ ನಾನು ಹಾಗೂ ಖ್ಯಾತ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವರ ವಿಚಾರದಲ್ಲಿ ಮಾತ್ರ ಸಂವಿಧಾನಬದ್ಧವಾದ ಸಿಎನ್‌ಸಿಯ ಬೇಡಿಕೆಗಳಿಗೆ ಪೂರಕವಾಗಿ ಕೊಡವರ ಪರ ಇರುವುದಾಗಿ ಹರಿಪ್ರಸಾದ್ ಹೇಳಿದರು.'

ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಭಾನುವಾರ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 29ನೇ ವರ್ಷದ ಸಾರ್ವತ್ರಿಕ ಕೈಲ್ ಪೊಳ್ದ್ ಹಬ್ಬ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕಲಂ 244ರ ಅಡಿಯಲ್ಲಿ ಕೊಡವರಿಗೆ ಸ್ವಯಂ ಆಡಳಿತದ ಅಗತ್ಯವನ್ನು ತಿಳಿಸಿದರು. ಕೊಡವರು ಕೊಡವಸೀಮೆಯ ಪುರಾತನ ಬುಡಕಟ್ಟು ಜನರಾಗಿರುವುದರಿಂದ, ಸಂವಿಧಾನದ ಖಾತರಿಗಳ ಮೂಲಕ ಈ ಮಣ್ಣಿನ ರಾಜಕೀಯ ಬಲ, ನೆಲ, ಜಲ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ನಿರ್ಧರಿಸುವ ಹಕ್ಕನ್ನು ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಡವರ ಅಮೋಘ ಸೇವೆಗಾಗಿ ಮತ್ತು ರಾಷ್ಟç ನಿರ್ಮಾಣದ ಅಪಾರ ಕೊಡುಗೆಗಾಗಿ ಋಣಿಯಾಗಿರಬೇಕು ಎಂದರು.

ಅಸಹಾಯಕ ಕೊಡವರ ಶಕ್ತಿಯಂತಿರುವ ಸಿಎನ್‌ಸಿಯ ಬಹುಕಾಲದ ಬೇಡಿಕೆಯನ್ನು ಈಡೇರಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದ್ದು, ಇದನ್ನು ಅತ್ಯಂತ ಆದ್ಯತೆ ಮತ್ತು ಮಾನವೀಯ ಧೋರಣೆಯೊಂದಿಗೆ ಪರಿಹರಿಸಬೇಕು. ಕೊಡವರ ಆಕಾಂಕ್ಷೆಗಳನ್ನು ಸಿಎನ್‌ಸಿ ಸಂಘಟನೆ ಇಷ್ಟು ದಿನ ಜೀವಂತವಾಗಿರಿಸಿಕೊAಡಿರುವುದು ಶ್ಲಾಘನೀಯ ಸಾಧನೆಯಾಗಿದೆ. ಹುಟ್ಟುವ ಪ್ರತಿಯೊಬ್ಬ ಕೊಡವ ನೈತಿಕ, ಆರ್ಥಿಕ ಮತ್ತು ದೈಹಿಕವಾಗಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು ಹಾಗೂ ವಿಸ್ತರಿಸಬೇಕು. ಸೈದ್ಧಾಂತಿಕವಾಗಿ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿರುವ ನಾನು ಹಾಗೂ ಖ್ಯಾತ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವರ ವಿಚಾರದಲ್ಲಿ ಮಾತ್ರ ಸಂವಿಧಾನಬದ್ಧವಾದ ಸಿಎನ್‌ಸಿಯ ಬೇಡಿಕೆಗಳಿಗೆ ಪೂರಕವಾಗಿ ಕೊಡವರ ಪರ ಇರುವುದಾಗಿ ಹರಿಪ್ರಸಾದ್ ಹೇಳಿದರು.