ಶೃಂಗೇರಿಯಲ್ಲಿ ಕಾರ್ಮಿಕ ವರ್ಗದ ಕುಟುಂಬಸ್ಥರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಡಾ. ಐಶ್ವರ್ಯಾ ಉದ್ಘಾಟಿಸಿದರು. ಪ್ರಶಾಂತ್, ಚಂದ್ರನಾಯ್ಕ, ಮುನಿಸ್ವಾಮಿ ಇತರರಿದ್ದರು. 
ಜಿಲ್ಲೆ

6 ತಿಂಗಳಿಗೊಮ್ಮೆ ಆರೋಗ್ಯ ತಪಸಾಣೆ ಮಾಡಿಸಿಕೊಳ್ಳಿ

ಎಸ್.ಎನ್.ರವೀಂದ್ರ

ಶೃಂಗೇರಿ: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಶಾರದಾಂಬ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದಿಂದ ಸೋಮವಾರ ಪಟ್ಟಣದ ಡಾ. ವಿ.ಆರ್.ಗೌರೀಶಂಕರ್ ಸಭಾಂಗಣದಲ್ಲಿ ಕಾರ್ಮಿಕ ವರ್ಗದ ಕುಟುಂಬಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.

ಬೆಂಗಳೂರಿನ ಡಾ. ಐಶ್ವರ್ಯಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರು ಕಾಲಕಾಲಕ್ಕೆ ಆಹಾರ ಸರಿಯಾಗಿ ಸೇವಿಸದೆ ಕೆಲಸ ಮಾಡುವುದರಿಂದ ಆರೋಗ್ಯ ಹದಗೆಡುತ್ತದೆ. ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. ಸಂಘದ 200ಕ್ಕೂ ಹೆಚ್ಚು ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸಂಘದ ಅಧ್ಯಕ್ಷ ಮುನಿಸ್ವಾಮಿ, ಉಪಾಧ್ಯಕ್ಷ ನೂರ್ ಅಹಮದ್, ಕಾರ್ಯದರ್ಶಿ ಶಿವರಾಮ್, ಮಾಜಿ ಅಧ್ಯಕ್ಷ ಚಂದ್ರನಾಯ್ಕ ಇದ್ದರು.