ಗಂಗೊಳ್ಳಿ: ವಿದ್ಯಾರ್ಥಿಗಳು ಯಾವುದೇ ಅಳುಕ್ಕಿಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕು. ಈ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ರೀತಿಯ ಪ್ರೋತ್ಸಾಹ ದೊರೆಯಬೇಕು. ವಿದ್ಯಾರ್ಥಿಗಳು ಇರುವ ಸಮಯ ಹಾಗೂ ಅವಕಾಶಗಳ ಸದ್ಬಳಕೆ ಮಾಡಿಕೊಂಡು ಗರಿಷ್ಠ ಅಂಕ ಗಳಿಸಲು ಶತಪ್ರಯತ್ನ ನಡೆಸಬೇಕು ಎಂದು ಕುಂದಾಪುರ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ನಾಯ್ಕ ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್ ಶುಭ ಹಾರೈಸಿದರು. ಪ್ರಾಂಶುಪಾಲೆ ಕವಿತಾ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಶೇಖರ್ ಮತ್ತು ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿವಿಧ ಶಾಲೆಗಳ ಸುಮಾರು 200ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಪನ್ಯಾಸಕ ಸುಜಯೀಂದ್ರ ಹಂದೆ ಸ್ವಾಗತಿಸಿದರು. ಪವಿತ್ರಾ ವಂದಿಸಿದರು. ಸುಗುಣಾ ಆರ್.ಕೆ. ಕಾರ್ಯಕ್ರಮ ನಿರೂಪಿಸಿದರು.