ಸುಂಟಿಕೊಪ್ಪ ಗದ್ದೆಹಳ್ಳ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಆರೋಗ್ಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. 
ಜಿಲ್ಲೆ

ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಕೊಳ್ಳಲಿ

ಎಂ.ರವಿ

ಸುಂಟಿಕೊಪ್ಪ: ಇಂದಿನ ಆಹಾರ ಪದ್ಧತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿ ಜೀವಿಸಬೇಕೆಂದರೆ ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ತಿಳಿಸಿದರು.

ಸುಂಟಿಕೊಪ್ಪ ಗದ್ದೆಹಳ್ಳ ಅಂಗನವಾಡಿ ಕೇಂದ್ರದಲ್ಲಿ ವಿಷನ್‌ಸ್ಟ್ರಿಂಗ್ ಹಾಗೂ ಆಶೋದಯ ಸಮಿತಿ ಮಡಿಕೇರಿ ಮತ್ತು ಕುಶಾಲನಗರ ಆರೋಗ್ಯ ಇಲಾಖೆಯ ಐಸಿಟಿಸಿ ಕೇಂದ್ರ ಸಹಯೋಗದಲ್ಲಿ ಸಾರ್ವಜನಿಕರಿಗೆ ಮತ್ತು ವಲಸೆ ಕಾರ್ಮಿರಿಗೆ ಭಾನುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಮಾಜ ಬೆಳೆದಂತೆ ಎಲ್ಲರೂ ಹೆಚ್ಚು ಒತ್ತಡದಿಂದ ಕಾರ್ಯನಿರ್ವಹಿಸುವಂತಾಗಿದೆ. ಆಹಾರ ಸೇವನೆ ಸೇರಿದಂತೆ ಆಹಾರ ಪದ್ಧತಿ ಬದಲಾವಣೆಗೊಳ್ಳುತ್ತಿರುವ ಕಾಲಘಟ್ಟದಲ್ಲಿ ಆರೋಗ್ಯಕ್ಕೆ ಒತ್ತು ನೀಡದೆ ಕಿರಿಯ ವಯಸ್ಸಿನಲ್ಲಿಯೇ ವಿವಿಧ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ಬೇಸರದ ಸಂಗತಿ. ಆದ್ದರಿಂದ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಜನತೆಗೆ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಕುಶಾಲನಗರ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಮುತ್ತಮ್ಮ, ದಿವಾಕರ್ ಮತ್ತು ಆಶೋದಯ ಸಮಿತಿಯ ನಾಗರತ್ನಾ, ಅಂಗನವಾಡಿ ಕಾರ್ಯಕರ್ತೆಯರಾದ ಲಕ್ಷ್ಮೀ, ಸಲಿನಾ ಹಾಗೂ ಇತರರು ಉಪಸ್ಥಿತರಿದ್ದರು.