ಅಂಬಲಪಾಡಿ ಜಂಕ್ಷನ್ ಮೇಲ್ಸೆತುವೆ ಕಾಮಗಾರಿಗೆ ಗರ್ಡರ್ ಅಳವಡಿಸಲಾಯಿತು.  
ಜಿಲ್ಲೆ

ಅಂಬಲಪಾಡಿ ಜಂಕ್ಷನ್‌ನಲ್ಲಿ ಗರ್ಡರ್ ಅಳವಡಿಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ಮೇಲ್ಸೆತುವೆ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಬುಧವಾರ ಗರ್ಡರ್ ಅಳವಡಿಸಲಾಯಿತು.

20 ಗರ್ಡರ್‌ಗಳನ್ನು ನಾಲ್ಕು ಕ್ರೇನ್‌ಗಳ ಮೂಲಕ ಪಿಲ್ಲರ್‌ಗಳ ಮೇಲೆ ಕೂರಿಸಲಾಗಿದೆ. ಇದರ ಮೇಲ್ಭಾಗದಲ್ಲಿ ಕಾಂಕ್ರೀಟ್ ಸ್ಲಾೃಬ್ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ ಎಂದು ಗುತ್ತಿಗೆ ಸಂಸ್ಥೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬ್ರಹ್ಮಗಿರಿಯಿಂದ ಅಂಬಲಪಾಡಿಗೆ ತೆರಳುವವರಿಗೆ ಈ ತಿಂಗಳ ಕೊನೆಗೆ ಮೇಲ್ಸೇತುವೆ ಕೆಳಭಾಗದಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದರು.

ಕಾಮಗಾರಿ ಪ್ರಾರಂಭವಾದ ಬಳಿಕ ಕಿನ್ನಿಮುಲ್ಕಿಯಿಂದ ಕರಾವಳಿ ಜಂಕ್ಷನ್‌ವರೆಗೆ ಎರಡೂ ಬದಿ ಸರ್ವಿಸ್ ರಸ್ತೆಯಲ್ಲೇ ವಾಹನಗಳು ತೆರಳಬೇಕಿರುವುದರಿಂದ ಆಗಾಗ್ಗೆ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಅಂಡರ್ ಪಾಸ್ ಸಂಚಾರಕ್ಕೆ ಮುಕ್ತವಾದರೆ ಅಂಬಲಪಾಡಿಗೆ ತೆರಳುವವರಿಗೆ ಅನುಕೂಲವಾಗಲಿದೆ.