ಧಾರವಾಡ: ಮಳೆಗಾಲ ಆರಂಭದೊ೦ದಿಗೆ ಜಿಲ್ಲೆಯ ಕೆಲವೆಡೆ ಡೆಂಘೆ ಹಾವಳಿ ಕಾಣಿಸಿಕೊಂಡಿದೆ.ತಾಲೂಕಿನ ಮುಮ್ಮಿಗಟ್ಟಿಯಲ್ಲಿ ಇತ್ತೀಚೆಗೆ ಸಮೃದ್ಧಿ ಬಸವರಾಜ ದೇಸಾಯಿ ಎಂಬ 4 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಜ್ವರದಿಂದ ಬಳಲುತ್ತಿದ್ದ ಸಮೃದ್ಧಿ, ಖಾಸಗಿ ಆಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ. ಇದು ಡೆಂಘೆ ಸಾವು ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಽಕಾರಿಗಳು ತಿಳಿಸಿದ್ದಾರೆ.
ಗ್ರಾಮದಲ್ಲಿ ಜ್ವರಪೀಡಿತ 6 ಪ್ರಕರಣಗಳು ಪತ್ತೆಯಾಗಿವೆ. ಕೆಲವರು ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿಯಿAದ ಗ್ರಾಮದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡಲಾಗಿದೆ.
ಗ್ರಾಮ ಪಂಚಾಯಿತಿಯವರು ತುರ್ತು ಸಭೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗ್ರಾಮದಲ್ಲಿ ಡಂಗುರ ಸಾರಿದ್ದಾರೆ. ಸೊಳ್ಳೆಗಳ ಹರಡುವಿಕೆ ತಡೆಗೆ ಚರಂಡಿಗಳನ್ನು ಸ್ವಚ್ಛ ಮಾಡಿಸಲಾಗಿದೆ.