ಕಲಬುರಗಿ: ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಯುವತಿ ಫೋಟೋವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಬೇಸತ್ತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲೂಕಿನ ಬುಗಡಿ ತಾಂಡಾದಲ್ಲಿ ಬುಧವಾರ ನಡೆದಿದೆ.
ಬುಗಡಿ ತಾಂಡಾ ನಿವಾಸಿ ಸರಿತಾ(18) ನೇಣಿಗೆ ಶರಣಾದ ದುರ್ದೈವಿ. ಅದೇ ಗ್ರಾಮದ ಶ್ರೀನಿವಾಸ ಎಂಬಾಂತ ಈ ನೀಚ ಕೃತ್ಯ ಎಸಗಿದ್ದಾನೆ.
ಆರೋಪಿ ಶ್ರೀನಿವಾಸ ಯುವತಿಯ ಜತೆ ತನ್ನ ಫೋಟೋ ರೀಮಿಕ್ಸ್ ಮಾಡಿ ಸಾಮಾಜಿಕ ತಾಣದಲ್ಲಿ ಹರಿಬಿಟ್ಟಿದ್ದ. ಅಲ್ಲದೆ, ದಿನನಿತ್ಯ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಆತನ ಕಾಟ ತಾಳಲಾರದೇ ಸರಿತಾ ನೇಣಿಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ.
ಪತ್ರ ಬರೆದಿಟ್ಟು ಸರಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಬೆನ್ನಲ್ಲೇ ಆರೋಪಿ ಶ್ರೀನಿವಾಸ ಗ್ರಾಮದಿಂದ ಪರಾರಿಯಾಗಿದ್ದಾನೆ. ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್)