ಮಂಗಳೂರು: ನಗರದ ಬಿಜೈ ಚರ್ಚ್ ರಸ್ತೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಶನಿವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡಿರುವ ಅಪ್ರಾಪ್ತೆ (17 ವರ್ಷ) ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನಲ್ಲಿಯೇ ಆಕೆಯ ತಾಯಿ ಶಿವನಮ್ಮ ಸ್ವಚ್ಛತಾ ಕಾರ್ಮಿಕೆಯಾಗಿ ಕೆಲಸ ಮಾಡಿಕೊಂಡಿದ್ದಾರೆ.ಇವರು ಮೂಲತಃ ಕೊಪ್ಪಳ ನಿವಾಸಿಯಾಗಿದ್ದಾರೆ.
ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮೃತಳು ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದೆ. ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.