ಜಿಲ್ಲೆ

ಚುನಾವಣಾ ವೆಚ್ಚದ ನಿಖರ ಮಾಹಿತಿ ನೀಡಿ

Chitradurga

ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆ ಖರ್ಚು-ವೆಚ್ಚ ಸಂಬಂಧ ನಿಖರ ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾ ಪ್ರಭು ಸೂಚಿಸಿದರು.

ಚುನಾವಣಾ ತರಬೇತಿ ನಿರ್ವಹಣಾ ಕೋಶದಿಂದ ಜಿಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಚುನಾವಣಾ ವೆಚ್ಚ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಪ್ರತಿ ಚುನಾವಣೆ ಹೊಸದೆಂದು ಭಾವಿಸಿ, ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳ ತಂಡ ಪಕ್ಷಗಳ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಮುಂಚಿತವಾಗಿ ಹಾಜರಿದ್ದು, ಖರ್ಚು-ವೆಚ್ಚದ ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಿಳಿಸಿದರು. ನೋಡಲ್ ಅಧಿಕಾರಿಗಳಾದ ಡಿ.ಆರ್.ಮಧು, ಎನ್.ರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಖಜಾನೆ ಉಪನಿರ್ದೇಶಕಿ ರತ್ನಕುಮಾರಿ,ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಂ.ಮಹೇಂದ್ರಕುಮಾರ್, ಡಯಟ್ ಹಿರಿಯ ಉಪನ್ಯಾಸಕ ಅಯುಬ್ ಸೊರಬ ಇತರರಿದ್ದರು.