ಜಿಲ್ಲೆ

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಮಾಜಿ ಸಚಿವ ಹಾಗೂ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ವೀರ ಕೇಸರಿ ಪಡೆ ಆಗ್ರಹಿಸಿದೆ.

ದಲಿತ ಸಮುದಾಯದ ಮತದಾರರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ದಲಿತ ಸಮುದಾಯವನ್ನು ಕಾಂಗ್ರೆಸ್ ಪರ ಒಗ್ಗೂಡಿಸುವ ನಿಟ್ಟಿನಲ್ಲಿ ಡಾ.ಎಚ್.ಸಿ.ಮಹದೇವಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರ ಪರಿಣಾಮವಾಗಿಯೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅಧಿಕಾರ ಹಿಡಿದಿದ್ದಾರೆ ಎಂದು ಕರ್ನಾಟಕ ವೀರಕೇಸರಿ ಪಡೆ ಅಧ್ಯಕ್ಷ ಮಧುವನ ಚಂದ್ರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖಂಡರಾದ ಕೆ.ಮಲ್ಲು, ಎಂ.ಎನ್.ಜಗದೀಶ್, ಅಬ್ದುಲ್ ಅತೀಕ್, ಮಹೇಶ್ ಅತ್ತಳ್ಳಿ ಇತರರಿದ್ದರು.