ಹನೂರು: ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಅನ್ಯಾಯವಾಗಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮಂಗಳವಾರ ಮಹದೇಶ್ವರ ಬೆಟ್ಟದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ ಅವರು ಶ್ರೀ ಮಲೆಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ದೀಪದಗಿರಿ ಒಡ್ಡುವಿನಲ್ಲಿ 108 ಅಡಿ ಎತ್ತರದ ಶ್ರೀ ಮಹದೇಶ್ವರರ ಪ್ರತಿಮೆ ಸ್ಥಾಪಿಸಿರುವುದು ಸಂತಸದ ಸಂಗತಿ. ಆದರೆ ಪ್ರತಿಮೆ ಸ್ಥಾಪಿಸುವ ವೇಳೆ ಇಲ್ಲಿನ ಜನರು ಪ್ರಾಧಿಕಾರಕ್ಕೆ ಕೃಷಿ ಮಾಡುತ್ತಿದ್ದ ಭೂಮಿಯನ್ನು ನೀಡಿದ್ದಾರೆ. ಜತೆಗೆ ಈ ವೇಳೆ ಜಮೀನಿನಲ್ಲಿದ್ದ ಮಾವು, ತೆಂಗು, ಹಲಸಿನ ಮರಗಳು ನಾಶವಾಗಿದೆ. ಜತೆಗೆ ಮನೆಗಳಿಗೆ ಹಾನಿಯಾಗಿದೆ. ಆದರೆ ಯಾವುದೇ ಸೌಕರ್ಯ ಕಲ್ಪಿಸಿಲ್ಲ. ಇದರಿಂದ ಇಲ್ಲಿನ ಜನರಿಗೆ ಅನ್ಯಾಯವಾಗಿದೆ. ಈ ಬಗ್ಗೆ ಶಾಸಕರು, ಸಚಿವರು ಹಾಗೂ ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸಿ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ದೀಪದಗಿರಿ ಒಡ್ಡುವಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ನೀಡದೇ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಸಾದ್, ಕುಮಾರ್, ನಟೇಶ್, ಜ್ಯೋತಿ, ಸುಂದ್ರಮ್ಮ, ಮಹದೇವಮ್ಮ ಹಾಗೂ ಇನ್ನಿತರರು ಇದ್ದರು.
ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಅನ್ಯಾಯವಾಗಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ರೈತ ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ ಅವರು ಶ್ರೀ ಮಲೆಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪ್ರಸಾದ್, ಕುಮಾರ್, ನಟೇಶ್, ಜ್ಯೋತಿ, ಸುಂದ್ರಮ್ಮ, ಮಹದೇವಮ್ಮ ಹಾಗೂ ಇನ್ನಿತರರು ಇದ್ದರು.