ಮಸ್ಕಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಏರ್ಪಡಿಸಿದ್ದ ಕೌಶಲ ತರಬೇತಿ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಲತಾ ಸೌದ್ರಿ, ಸುವರ್ಣ ಬ್ಯಾಳಿ ಮತ್ತು ಕಸ್ತೂರಿ ಇತ್ಲಿ, ಆರತಿ ಠಾಕೂರು ಇತರರಿದ್ದರು. 
ಜಿಲ್ಲೆ

ಮಕ್ಕಳ ಉನ್ನತ ಶಿಕ್ಷಣಕ್ಕೆ ಆದ್ಯತೆ ನೀಡಿ

ರುದ್ರಪ್ಪ ವಾಲಿ

ಮಸ್ಕಿ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಿರ್ವಹಿಸಬೇಕಾದರೆ ಕೌಶಲ ರೂಢಿಸಿಕೊಳ್ಳಬೇಕು ಎಂದು ಬಣಜಿಗ ಸಮಾಜದ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಲತಾ ಸೌದ್ರಿ ಹೇಳಿದರು.

ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬಣಜಿಗ ಸಮಾಜದ ಮಹಿಳೆಯರಿಗಾಗಿ ಏರ್ಪಡಿಸಿದ್ದ ಒಂದು ದಿನದ ಕೌಶಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಕೇವಲ ಮನೆಗೆಲಸಕ್ಕೆ ಸೀಮಿತರಾಗದೆ ತಮ್ಮಲ್ಲಿರುವ ಪ್ರತಿಭೆ ಗುರುತಿಸಿ ಜನರಿಗೆ ತಿಳಿಸುವ ಕೆಲಸ ಮಾಡಬೇಕು. ಕೌಟುಂಬಿಕ ಸ್ವಾಸ್ಥ್ಯ ಕಾಪಾಡುವುದರ ಜತೆಗೆ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದರು.

ಆರತಿ ಠಾಕೂರು ಅವರು ಮಹಿಳೆಯರಿಗಾಗಿ ಕೌಶಲ ತರಬೇತಿ ನೀಡಿದರು. ಸುವರ್ಣ ಬ್ಯಾಳಿ ಮತ್ತು ಕಸ್ತೂರಿ ಇತ್ಲಿ ಮಾತನಾಡಿದರು.