ರಾಷ್ಟ್ರೀಯ ಸ್ವಚ್ಛತಾ ದಿನ ನಿಮಿತ್ತ ಮಸ್ಕಿ ಗಾಂಧಿನಗರದ ಅಂಬೇಡ್ಕರ್ ಪುತ್ಥಳಿ ಬಳಿ ಶ್ರಮದಾನ ನಡೆಯಿತು. ನ್ಯಾಯಾಧೀಶ ಅಚ್ಚಪ್ಪ ದೊಡ್ಡ ಬಸವರಾಜ, ವಕೀಲರ ಸಂಘದ ಅಧ್ಯಕ್ಷ ಈಶಪ್ಪ ದೇಸಾಯಿ, ಪಿಎಸ್‌ಐ ಮುದ್ದುರಂಗಸ್ವಾಮಿ, ಪೌರ ಕಾರ್ಮಿಕರು ಇದ್ದರು. 
ಜಿಲ್ಲೆ

ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ

Kopala - Desk - Eraveni

ಮಸ್ಕಿ: ಪ್ರತಿಯೊಬ್ಬರೂ ಸ್ವಚ್ಛ ಭಾರತ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ನ್ಯಾಯಾಧೀಶ ಅಚ್ಚಪ್ಪ ದೊಡ್ಡ ಬಸವರಾಜ ಹೇಳಿದರು.

ರಾಷ್ಟ್ರೀಯ ಸ್ವಚ್ಛತಾ ದಿನದ ನಿಮಿತ್ತ ಪಟ್ಟಣದ ಗಾಂಧಿನಗರದ ಡಾ.ಅಂಬೇಡ್ಕರ್ ಪುತ್ಥಳಿ ಬಳಿ ಗುರುವಾರ ಸಿಂಧನೂರು ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಮಸ್ಕಿ ನ್ಯಾಯವಾದಿಗಳ ಸಂಘ ಹಮ್ಮಿಕೊಂಡಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧಿ ಕಂಡ ಸ್ವಚ್ಛ ಭಾರತ ಪರಿಕಲ್ಪನೆ ಸಾಕಾರಗೊಳ್ಳಬೇಕು. ಪ್ರತಿಯೊಬ್ಬರೂ ಕೆಲಸದ ಸ್ಥಳ, ಮನೆ ಮತ್ತು ಸುತ್ತಲಿನ ವಾತಾವರಣ, ಉದ್ಯಾನ, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಭಾರತದಲ್ಲಿ ಪ್ರತಿವರ್ಷ ಜ.30ರಂದು ರಾಷ್ಟ್ರೀಯ ಸ್ವಚ್ಛತಾ ದಿನ ಆಚರಿಸಲಾಗುತ್ತದೆ. ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಗಾಂಧೀಜಿ ಮತ್ತು ಡಾ.ಅಂಬೇಡ್ಕರ್ ಪುತ್ಥಳಿಯನ್ನು ನ್ಯಾಯಾಧೀಶ ಅಚ್ಚಪ್ಪ ದೊಡ್ಡಬಸವರಾಜ ಮತ್ತು ವಕೀಲರು ಶುಚಿಗೊಳಿಸಿದರು. ವಕೀಲರ ಸಂಘದ ಅಧ್ಯಕ್ಷ ಈಶಪ್ಪ ದೇಸಾಯಿ, ಪಿಎಸ್‌ಐ ಮುದ್ದುರಂಗಸ್ವಾಮಿ ಇತರರಿದ್ದರು.