ಗಂಗಾವತಿ ತಾಪಂ ಮಂಥನಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾದಿನ ಆಚರಣೆ ಮಾಡಲಾಯಿತು. ಶಾಸಕ ಗಾಲಿ ಜನಾರ್ದನರೆಡ್ಡಿ, ವೈಜೆಆರ್ ಪಿಯು ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಕಲ್ಯಾಣಂ ಜಾನಕೀರಾಂ, ಲಿಟ್ಲ ಹಾರ್ಟ್ಸ್ ಶಾಲೆ ಕಾರ್ಯದರ್ಶಿ ಜಗನ್ನಾಥ ಆಲ್ಲಂಪಲ್ಲಿ, ಟಿಎಪಿಸಿಎಂಎಸ್ ನಿರ್ದೇಶಕ ಜೋಗದ ನಾರಾಯಣಪ್ಪ ನಾಯಕ ಇತರರಿದ್ದರು. 
ಜಿಲ್ಲೆ

ವಾಸ್ತವಾಂಶದ ಸುದ್ದಿಗಳಿಗೆ ಆದ್ಯತೆ ನೀಡಲಿ

ರುದ್ರಪ್ಪ ವಾಲಿ

ಗಂಗಾವತಿ: ವಸ್ತುನಿಷ್ಠ ಸುದ್ದಿಗಳಿಗೆ ಪತ್ರಕರ್ತರು ಆದ್ಯತೆ ನೀಡಬೇಕಿದ್ದು, ನೈಜ ಸುದ್ದಿಗಳನ್ನು ಬಿತ್ತರಿಸುವಂತೆ ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು.

ನಗರದ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಅವಸರದಲ್ಲಿ ಸುದ್ದಿ ಪ್ರಕಟಿಸುವ ಬದಲು, ವಾಸ್ತವಾಂಶದ ಸುದ್ದಿಗಳಿಗೆ ಆದ್ಯತೆ ನೀಡಬೇಕು. ಪತ್ರಿಕಾ ಭವನದ ಗ್ರಂಥಾಲಯಕ್ಕೆ ಅಗತ್ಯ ಅನುದಾನ ನೀಡಲಾಗುವುದು ಎಂದರು.

ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ ಮಾತನಾಡಿ, ಈ ಭಾಗದ ಶೈಕ್ಷಣಿಕ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ಸುದ್ದಿಗಳನ್ನು ರಾಜ್ಯಮಟ್ಟದಲ್ಲಿ ಪ್ರಕಟಿಸುವಂತೆ ಸಲಹೆ ನೀಡಿದರು.


ಎಸ್‌ಕೆಎನ್‌ಜಿ ಸರ್ಕಾರ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಜಾಜಿ ದೇವೇಂದ್ರಪ್ಪ ಉಪನ್ಯಾಸ ನೀಡಿದರು.ಅಕ್ಷರ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ರವಿಚೈತನ್ಯರೆಡ್ಡಿ, ಮುಖಂಡ ವೆಂಕಟೇಶ ಅಮರಜ್ಯೋತಿ, ಕಾಕನಿಪ ಸಂಘದ ತಾಲೂಕು ಅಧ್ಯಕ್ಷ ಇ.ನಾಗರಾಜ್ ಇತರರಿದ್ದರು.