ಜಿಲ್ಲೆ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

ಲಲಾಟಾಕ್ಷ ಎಸ್

ನುಗ್ಗೇಹಳ್ಳಿ: ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕು ಎಂದು ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೆ.ಎ.ಶಿವರಾಂ ತಿಳಿಸಿದರು.


ಪಿ.ಎಚ್.ದೇಶಪಾಂಡೆ ಎನ್‌ಎಲ್‌ಎಂ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತುಪ್ರದರ್ಶನ, ಮಕ್ಕಳ ಸಂತೆ, ಆಹಾರ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ಜನರು ಕೂಲಿ ಮಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಅಂತಹ ಮಕ್ಕಳನ್ನು ಕೇಂದ್ರೀಕರಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.


ಸಾಹಿತಿ ಬೆಳಗುಲಿ ಕೆಂಪಯ್ಯ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.


ಶಾಲೆಯ ಕಾರ್ಯದರ್ಶಿ ಶಶಿಕಲಾ, ಇಸಿಒ ನಿತ್ಯಾನಂದ, ಸಿಆರ್‌ಪಿ ಮಂಜೇಗೌಡ, ಮುಖ್ಯ ಶಿಕ್ಷಕ ರವಿ, ಮುಖಂಡರಾದ ಎನ್.ಡಿ.ಶಂಕರ್, ನಿಂಗರಾಜ್, ಸೋಮಶೇಖರ್, ಪಾಲಕರು ಹಾಜರಿದ್ದರು.