ಕೊಪ್ಪ:ಹೊರಗುತ್ತಿಗೆ ಅಡಿ ಸೇವೆ ಸಲ್ಲಿಸುವ ಪೌರ ಕಾರ್ಮಿಕರು, ನೀರು ಸರಬರಾಜು ನೌಕರರು, ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವವರಿಗೆ ಸರ್ಕಾರಿ ನೌಕರರಿಗೆ ನೀಡುವ ಸೌಲಭ್ಯಗಳನ್ನು ನೀಡಬೇಕು ಎಂದು ರಾಜ್ಯ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಆರ್.ನಾರಾಯಣ್ ಒತ್ತಾಯಿಸಿದರು.
ಕೊಪ್ಪದ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. ಜ್ಯೋತಿ ಸಂಜೀವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಆರ್. ನಾರಾಯಣ್ ಸದಸ್ಯರಾದ ಶಶಿಕುಮಾರ್, ಎಂ.ವೆಂಕಟೇಶ್, ರವಿ, ಉಮೇಶ್, ಶಿವಮ್ಮ, ನೇತ್ರಮ್ಮ, ಲಕ್ಷ್ಮೀ ಮತ್ತಿತರರಿದ್ದರು.