ಜಿಲ್ಲೆ

ಪ್ರತಿಜ್ಞಾವಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು

ಎ. ಆರ್. ರಘುರಾಮ

ಗೋಣಿಕೊಪ್ಪ: ಕೊಡವ ಎಜುಕೇಷನ್ ಸೊಸೈಟಿಯ ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್
ಆಫ್ ಪಿ.ಯು.ಕಾಲೇಜಿನಲ್ಲಿ ಸೋಮವಾರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ‘ಆರೋಗ್ಯವಂತ ಭಾರತಕ್ಕೆ ಆರೋಗ್ಯವಂತ ಯುವಜನತೆ’ ಧ್ಯೇಯ ವಾಕ್ಯದ ಅಭಿಯಾನಕ್ಕೆ ವಿದ್ಯಾರ್ಥಿಗಳು ಪ್ರಮಾಣವಚನ ಸ್ವೀಕರಿಸಿ ಸಾಕ್ಷಿಯಾದರು.
78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಕೇಂದ್ರ ಸರ್ಕಾರವು ನಶಾಮುಕ್ತ ಭಾರತ ಅಭಿಯಾನದಡಿ ಮಾದಕ ವಸ್ತು ಸೇವನೆ ಮಾಡದಿರಲು ಭಾರತದ ಯುವಜನತೆಯಲ್ಲಿ ಅರಿವು ಮೂಡಿಸುವ ಸಲುವಾಗಿ ನೀಡಿದ ಆದೇಶದ ಅನ್ವಯ ಈ ಅಭಿಯಾನ ರೂಪಿಸಿರುವುದು ವಿಶೇಷ. ದ್ವಿತೀಯ ಪಿ.ಯು.ವಿದ್ಯಾರ್ಥಿನಿ ದಿತ್ಯಾ ದೇಚಮ್ಮ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರು ಮತ್ತು ಸಿಬ್ಬಂದಿ ಹಾಜರಿದ್ದರು.