ಜಿಲ್ಲೆ

‘ವರುಷದ ಹರುಷ’ ಜಿ.ಎಲ್. ಶಾಪಿಂಗ್ ಹಬ್ಬ - ಗ್ರಾಹಕರಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್‍ಸ್ ಸಂಸ್ಥೆ ಕೊಡುಗೆ

Mangaluru - Nishantha Narayana

ಪುತ್ತೂರು ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್‍ಸ್ ಸಂಸ್ಥೆ ಪುತ್ತೂರು, ಮೂಡುಬಿದಿರೆ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ಶಾಖೆಗಳಲ್ಲಿ ವಾರ್ಷಿಕೋತ್ಸವ ಸಂಭ್ರಮ ಪ್ರಯುಕ್ತ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ ‘ವರುಷದ ಹರುಷ’ ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.೧೩ರಿಂದ ಆಯೋಜಿಸಿದೆ.

ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ೨೦೦ ರೂ.ವರೆಗೆ ರಿಯಾಯಿತಿ ನೀಡುವ ಜತೆಗೆ ೨೫ ಸಾವಿರ ರೂ. ಹಾಗೂ ಅದಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಹಾಗೂ ಆಕರ್ಷಕ ಉಡುಗೊರೆಗಳನ್ನು ಪಡೆದುಕೊಳ್ಳುವ ಅವಕಾಶವಿದೆ.

ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಎಲ್ಲ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು, ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ ‘ಪ್ರಾಚಿ’ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿವೆ.

ನೂತನ ಆಂಟಿಕ್ ‘ಪ್ರಾಚಿ ಎಲೈಟ್’ ವಿಭಾಗದಲ್ಲಿ ಅತ್ಯುತ್ತಮ ಕೆಲಸಗಾರಿಕೆ ಹಾಗೂ ಹೊಸ ವಿನ್ಯಾಸದಿಂದ ಕಣ್ಮನ ಸೆಳೆಯುವ ಲೈಟ್ ವೇಟ್ ಆಭರಣಗಳು ಲಭ್ಯವಿದೆ. ‘ಗ್ಲೋ’ ವಜ್ರಾಭರಣ ವಿಭಾಗದಲ್ಲಿ ೨ ಸಾವಿರಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ. ‘ಪಾರ್ಥ’ ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೆ ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ಧವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.