ಮಂಗಳೂರು : ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಇರುತ್ರದೆ. ಅದಕ್ಕೆ ಸೂಕ್ತ ವೇದಿಕೆ ಕಲ್ಪಿಸಿದರೆ ಪ್ರತಿಭೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣ್‌ಪ್ರಭ ಹೇಳಿದರು.
ಗ್ಲೋಬಲ್ ಇಕೋ ಗ್ರೀನ್ ಫೌಂಡೇಶನ್ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ನಗರದ ಗಾಂಧಿನಗರ ಸಕಾರ ಹಿರಿಯ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚಿತ್ರಕಲಾ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು ಮಕ್ಕಳ ಪ್ರತಿಭೆಗೆ ಹೆತ್ತವರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದರು.
ಉದ್ಯಮಿ ದಿಲ್ರಾಜ್ ಆಳ್ವ, ಫಣಿ ಸಾಂಬಾಶಿವ ರಾವ್ ನಡೆಲ್ಲಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ್ ರೈ, ಕೋಶಾಧಿಕಾರಿ ಪುಷ್ಪರಾಜ್ ಬಿ .ಎನ್., ಸ್ಪರ್ಧೆಯ ತೀರ್ಪುಗಾರರಾದ ಗೀತಾ .ಬಿ. ರೈ,, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.