ಚಿರಾಗ್ ಸಿ.ಪೂಜಾರಿ  
ಜಿಲ್ಲೆ

ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ಗೆ ಚಿನ್ನ

ಇಂದಿರಾ ಎನ್ ಕೆ

ಕಾರ್ಕಳ: ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ 35ನೇ ಸೌತ್ ಜೋನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 200 ಮೀ. ಓಟದ ಸ್ಪರ್ಧೆ ಹಾಗೂ ರಿಲೇಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚಿರಾಗ್ ಸಿ. ಪೂಜಾರಿ ಕಂಚು ಹಾಗೂ ಚಿನ್ನದ ಪದಕ ವಿಜೇತರಾಗಿದ್ದಾರೆ. 18ರ ವಯೋಮಿತಿ ವಿಭಾಗದಲ್ಲಿ ಚಿರಾಗ್ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರಪೂಜಾರಿ ಹಾಗೂ ಜಯಲಕ್ಷ್ಮೀ ದಂಪತಿ ಪುತ್ರ. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲ, ಬೋಧಕ-ಬೋಧಕೇತರ ವರ್ಗದವರು ಸಾಧಕ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.