ಜಿಲ್ಲೆ

ಬೀರುವಿನಲ್ಲಿ ಇಟ್ಟಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮೈಸೂರು: ಮನೆಯ ಬೀರುವಿನಲ್ಲಿ ಇಟ್ಟಿದ್ದ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಕಳುವಾಗಿದೆ ಎಂದು ರಮಾಬಾಯಿನಗರದ ನಾಗಮಣಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯ ಬೀರುವಿನಲ್ಲಿ 164 ಗ್ರಾಂ ತೂಕದ ಚಿನ್ನಾಭರಣವನ್ನು ಇಟ್ಟಿದ್ದು, ಅದನ್ನು ಯಾರೋ ಕಳ್ಳತನ ಮಾಡಿದ್ದಾರೆ. ನೆರೆ, ಹೊರೆಯವರು ಕಳ್ಳತನ ಮಾಡಿರುವ ಬಗ್ಗೆ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಿದ್ದು, ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.