ಬೆಂಗಳೂರು ನಗರ ವಿವಿ ಕುಲಾಧಿಪತಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಂದ ಅವನಿ ಶರ್ಮಾ ಸ್ವರ್ಣ ಪದಕ ಸ್ವೀಕರಿಸಿದರು. 
ಜಿಲ್ಲೆ

ಅವನಿ ಶರ್ಮಾಗೆ ಚಿನ್ನದ ಪದಕ

ಮಂಗಳೂರು: ಬೆಂಗಳೂರು ನಗರ ವಿವಿಯ ಚಿತ್ರಕಲಾ ಪರಿಷತ್ ವಿದ್ಯಾರ್ಥಿನಿ ಅವನಿ ಶರ್ಮಾ, ಕಲಾ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‌್ಯಾಂಕಿನೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.

ಇವರು ಮಂಗಳೂರಿನ ಮಹಾಲಸಾ ಚಿತ್ರಕಲಾ ಶಾಲೆಯಲ್ಲಿ ಪದವಿ ಪಡೆದಿದ್ದು, ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ವೇಣು ಶರ್ಮಾ-ರಶ್ಮಿ ಶರ್ಮಾ ದಂಪತಿ ಪುತ್ರಿ. ಸೋಮವಾರ ಬೆಳಗ್ಗೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾದ ಬೆಂಗಳೂರು ನಗರ ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಿದ್ದರು. ಗೌರವ ಡಾಕ್ಟರೇಟ್ ಪುರಸ್ಕೃತರಾದ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಿಸಾರ್ ಅಹಮ್ಮದ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ. ಕೃಷ್ಣ, ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದ ಸೇರಿದಂತೆ ಹಲವರಿದ್ದರು.