ಹೊಸನಗರ: ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಜೆ.ಸುಮನ್ ಅಂತಿಮ ವರ್ಷದ ದಂತ ವೈದ್ಯಕೀಯ ಪರೀಕ್ಷೆಯಲ್ಲಿ ಶೇ.82 ಲಿತಾಂಶ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೆ ಐದು ವಿಷಯದಲ್ಲಿ ಉತ್ತಮ ಸಾಧನೆ ಮಾಡಿ ಐದು ಚಿನ್ನದ ಪದಕಗಳನ್ನು ಪಡೆದಿದ್ದಾನೆ. ಜೆ.ಸುಮನ್ ಹೊಸನಗರದ ಕಾರಣಗಿರಿ ಯ ಜಯರಾಮ್ ಮತ್ತು ರತ್ನಾ ದಂಪತಿಯ ಪುತ್ರ.