ಜಿಲ್ಲೆ

2.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಆರ್.ಕೃಷ್ಣ

ಮೈಸೂರು: ಮನೆಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕೃಷ್ಣರಾಜ ಠಾಣೆಯ ಪೊಲೀಸರು 2.35 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

2024ರ ನ.22ರಂದು ರಾಮಾನುಜ ರಸ್ತೆ, 18ನೇ ಕ್ರಾಸ್ ನಲ್ಲಿರುವ ಮನೆಯೊಂದರಲ್ಲಿ ಚಿನ್ನಾಭರಣಗಳು ಕಳುವಾಗಿದ್ದು, ಈ ಬಗ್ಗೆ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು, ತಮಗೆ ದೊರೆತ ತಾಂತ್ರಿಕ ಮತ್ತು ಖಚಿತ ಮಾಹಿತಿಯ ಮೇರೆಗೆ ನಗರ ಕಾಡಾ ಕಚೇರಿ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಮೈಸೂರಿನಲ್ಲಿ ಮನೆ ಕಳ್ಳತ ಅಲ್ಲದೆ ಬೆಂಗಳೂರಿನ ಕೊಣನಕುಂಟೆ ಪೊಲೀಸ್ ಠಾಣೆಯ ದ್ವಿಚಕ್ರ ವಾಹನ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.