ಜಿಲ್ಲೆ

ಡಿ.2ಕ್ಕೆ ಕುಶಾಲನಗರದಲ್ಲಿ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಂಭ್ರಮ

ಕುಶಾಲನಗರ:

ಡಿಸೆಂಬರ್ 2 ರಂದು ಕುಶಾಲನಗರದಲ್ಲಿ ತಮ್ಮ ಸಂಘಟನೆ ವತಿಯಿಂದ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ್ ಕೆ. ಎನ್. ತಿಳಿಸಿದ್ದಾರೆ.

ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಸಂಭ್ರಮ ಎಂಬ ಶೀರ್ಷಿಕೆಯಡಿ ಕರವೇ ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ ಕುಶಾಲನಗರದ ಕಾರು ನಿಲ್ದಾಣದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ ಕರವೇ ರಾಜ್ಯಾಧ್ಯಕ್ಷÀ ಟಿ.ಎ. ನಾರಾಯಣಗೌಡ ಅವರನ್ನು ತೆರೆದ ಜೀಪಿನಲ್ಲಿ ಕಾವೇರಿ ಪ್ರತಿಮೆ ಬಳಿಯಿಂದ ವೇದಿಕೆ ವರೆಗೆ ಮೆರವಣಿಗೆ ಮೂಲಕ ಕರೆತರಲಾಗುವುದು. ಸಭಾ ಕಾರ್ಯಕ್ರಮ, ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾರ್ಯಕ್ರಮ ಒಂದು ವಾರದ ಮುಂಚಿತವಾಗಿ ನವೆಂಬರ್ 24 ರಂದು ಕರವೇ ಮಹಿಳಾ ಘಟಕದ ವತಿಯಿಂದ ಮಹಿಳೆಯರಿಗೆ ರಂಗೋಲಿ ಮತ್ತಿತ್ತರ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಕರವೇ ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಮಾತನಾಡಿ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷನಾಗಿ ನಿಯೋಜನೆಗೊಂಡ ಹಿನ್ನಲೆಯಲ್ಲಿ ಕುಶಾಲನಗರದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದು ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ಕರವೇ ಪದಾಧಿಕಾರಿಗಳು ವಿವಿಧ ಸಂಘಸAಸ್ಥೆಗಳ ಸಹಯೋಗದಲ್ಲಿ ಬೃಹತ್ ಮೆರವಣಿಗೆ ನಡೆಸಲಾಗುವುದು ಎಂದು ಇಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರವೇ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ಮಾತನಾಡಿ, ಕುಶಾಲನಗರದ ಸಂಘಸAಸ್ಥೆಗಳ ಪದಾಧಿಕಾರಿಗಳು ಅಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಿದೆ. ಅದೇ ರೀತಿ ಸ್ಪರ್ಧಾಳುಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳುವAತೆ ಮನವಿ ಮಾಡಿದರು.
ಕರವೇ ಜಿಲ್ಲಾ ಘಟಕದ ಉಪಾಧ್ಯಕ್ಷ ದಿನೇಶ್, ತಾಲೂಕು ಘಟಕದ ಉಪಾಧ್ಯಕ್ಷ ಚಂದ್ರು, ಪದಾಧಿಕಾರಿ ಆನಂದ್ ಸುದ್ದಿಗೋಷ್ಠಿಯಲ್ಲಿ ಇದ್ದರು.