ಸೋಮವಾರಪೇಟೆ ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರವಿಕುಮಾರ್, ವಿಜಯ್, ವಿನೋದ್ ಇದ್ದರು.  
ಜಿಲ್ಲೆ

ಗೋಣಿಮರೂರು ಶಾಲೆಯಲ್ಲಿ ಸಾಧಕರಿಗೆ ಸನ್ಮಾನ

ಮಾದೇಶ್ ತಿ.ನರಸೀಪುರ

ಸೋಮವಾರಪೇಟೆ: ಅಪ್ಪು ಅಭಿಮಾನಿಗಳ ಬಳಗದಿಂದ ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸಿದ ಪ್ರೇಕ್ಷಾ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಆಟೋ ಚಾಲಕ ಮುನೀರ್, 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಧ್ರುವ, ಲಿಸ್ಮಾ, ಮೋಹನ್ ಅವರನ್ನು ಸನ್ಮಾನಿಸಲಾಯಿತು.

ಅಪ್ಪು ಅಭಿಮಾನಿಗಳ ಬಳಗದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ್, ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ವಿನೋದ್‌ಕುಮಾರ್, ಸದಸ್ಯ ಶಿವದಾಸ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ, ಜೇಸಿ ಮಾಜಿ ಅಧ್ಯಕ್ಷೆ ಎಂ.ಎ. ರುಬೀನಾ, ಮಾಜಿ ಸೈನಿಕ ಗಣೇಶ್ ಮತ್ತಿತರರು ಇದ್ದರು.