ರಾಯಚೂರಿನ ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಮಾನದ ದಿನಾಚರಣೆಯನ್ನು ಹಿರಿಯ ಸಾಹಿತಿ ವೀರಹನುಮಾನ ಉದ್ಘಾಟಿಸಿದರು. ನಿವೃತ್ತ ಉಪನ್ಯಾಸಕಿ ಡಾ.ರಾಜಶ್ರೀ ಕಲ್ಲೂರಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಶಿಕ್ಷಕ ಮುರಳೀಧರ ಕುಲಕರ್ಣಿ, ಗಾಯಕಿ ಪ್ರತಿಭಾ ಗೋನಾಳ ಇದ್ದರು. 
ಜಿಲ್ಲೆ

ಕುವೆಂಪು ದೂರದೃಷ್ಟಿ ಎಲ್ಲ ಕಾಲಕ್ಕೂ ಅನ್ವಯ

ರಾಚಯ್ಯ ಸ್ವಾಮಿ

ರಾಯಚೂರು: ಕುವೆಂಪುರವರ ವಿಶ್ವಮಾನವ ಕಲ್ಪನೆ ಆಧ್ಯಾತ್ಮಿಕವಾಗಿ ಹಾಗೂ ವೈಜ್ಞಾನಿಕವಾಗಿ ಅದ್ಭುತ ಕಲ್ಪನೆಯಾಗಿದ್ದು, ಅವರ ದೂರದೃಷ್ಟಿ ಎಲ್ಲ ಕಾಲ ಮತ್ತು ಸಂದರ್ಭಗಳಿಗೆ ಅನ್ವಯವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕಿ ಡಾ.ರಾಜಶ್ರೀ ಕಲ್ಲೂರಕರ್ ಹೇಳಿದರು.
ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಏರ್ಪಡಿಸಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಷ್ಯ ಹುಟ್ಟುತ್ತಾ ವಿಶ್ವ ಮಾನವನಾಗಿದ್ದರೂ ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ ಎಂದು ಕುವೆಂಪು ತಿಳಿಸಿದ್ದಾರೆ ಎಂದರು.
ಕುವೆಂಪು ಮಾನವ ಕುಲಕ್ಕೆ ನೀಡಿದ ಮಾರ್ಗದರ್ಶನ, ಆದರ್ಶಗಳು ಸರ್ವಕಾಲಿಕವಾಗಿದ್ದು, ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ವೀರ ಹನುಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕುವೆಂಪು ಕವಿಯಾಗಿ, ಕಾದಂಬರಿಕಾರರಾಗಿ ಸಾಹಿತ್ಯದ ವಿವಿಧ ಮಜಲುಗಳಲ್ಲಿ ಕೃಷಿ ಮಾಡಿದ್ದಾರೆ. ಜಗತ್ತಿಗೆ ವಿಶ್ವಮಾನವ ಸಂದೇಶ ನೀಡಿದ ಅವರ ಜೀವನದ ವೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಶಿಕ್ಷಕ ಮುರಳೀಧರ ಕುಲಕರ್ಣಿ, ಗಾಯಕಿ ಪ್ರತಿಭಾ ಗೋನಾಳ ಉಪಸ್ಥಿತರಿದ್ದರು.