ಜಿಲ್ಲೆ

ಉತ್ತಮ ಸ್ನೇಹಿತರು ಬಹುದೊಡ್ಡ ಆಸ್ತಿ

ಇಂದಿರಾ ಎನ್ ಕೆ

ಗಂಗೊಳ್ಳಿ: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಗಂಗೊಳ್ಳಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ನಿವೃತ್ತ ಉಪನ್ಯಾಸಕ ಎಚ್.ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶಿನಾಥ್ ಪಿ. ಪೈ ಅಧ್ಯಕ್ಷತೆ ವಹಿಸಿದ್ದರು. ಎಚ್.ಭಾಸ್ಕರ್ ಶೆಟ್ಟಿ ಮತ್ತು ಶೋಭಾ ರಾಣಿ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ಉಡುಪಿಯ ವಕೀಲ ಎಚ್.ರಾಘವೇಂದ್ರ ಶೆಟ್ಟಿ, ಗಂಗೊಳ್ಳಿಯ ಸಮಾಜಸೇವಕಿ ಮಂಜುಳ ದೇವಾಡಿಗ, ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘ ಅಧ್ಯಕ್ಷ ಗೋಪಾಲ ಬಿಲ್ಲವ ಉಪಸ್ಥಿತರಿದ್ದರು.

ಸ್ನೇಹಿತರ ಬಳಗದ ಶ್ರೀಧರ ಗಾಣಿಗ ಸ್ವಾಗತಿಸಿದರು. ಉಪನ್ಯಾಸಕ ನಾರಾಯಣ್ ಈ. ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೇಖಾ ಮತ್ತು ಸಂಜನಾ ಪ್ರಾರ್ಥಿಸಿದರು. ಗೋಪಾಲ ಚಂದನ್ ಮತ್ತು ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಜಿ. ಆರ್. ಪ್ರಭಾಕರ ಶೇರುಗಾರ್ ವಂದಿಸಿದರು.